8:58 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮೂಡಿಗೆರೆ | 3,000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಹುಚ್ಚಾಟ: ರೀಲ್ಸ್‌ ಪ್ರೇಮಿಗಳಿಗೆ ಅರಣ್ಯ ಇಲಾಖೆ ಬಿಗ್ ಶಾಕ್

20/08/2026, 18:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಫಾಲೋವರ್ಸ್ ಗಳಿಸುವ ಹುಚ್ಚಿನಲ್ಲಿ ಪ್ರವಾಸಿಗರು ತಮ್ಮ ಪ್ರಾಣದ ಜೊತೆ ಚೆಲ್ಲಾಟವಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ‘ರಾಣಿ ಝರಿ ಪ್ರವಾಸಿ ತಾಣದಲ್ಲಿ ನಡೆದಿದೆ. ನಿಷೇಧಿತ ಪ್ರದೇಶದಲ್ಲೂ ಥಾರ್ ಜೀಪ್ ಸಾಹಸ ಸುಂಕಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಣಿ ಝರಿ ವ್ಯೂ ಪಾಯಿಂಟ್‌ನಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದಾಗ್ಯೂ, ಬೆಂಗಳೂರು ಮೂಲದ ಪ್ರವಾಸಿಗರು ನಿಯಮ ಮೀರಿ ಸುಮಾರು 3,000 ಅಡಿ ಆಳದ ಪ್ರಪಾತದ ತುದಿಯಲ್ಲೇ ಥಾರ್ ಜೀಪ್ ಓಡಿಸಿ ಅಪಾಯಕಾರಿ ರೀತಿಯಲ್ಲಿ ರೀಲ್ಸ್ ಚಿತ್ರೀಕರಿಸಿದ್ದಾರೆ. ಸ್ವಲ್ಪ ನಿಯಂತ್ರಣ ತಪ್ಪಿದ್ದರೂ ಭಾರಿ ದುರಂತ ಸಂಭವಿಸುವ ಸಾಧ್ಯತೆಯಿತ್ತು. ವಾಹನ ವಶಕ್ಕೆ, ಪ್ರಕರಣ ದಾಖಲು
ಪ್ರವಾಸಿಗರ ಈ ಅಪಾಯಕಾರಿ ಹುಚ್ಚಾಟದ ವಿಷಯ ತಿಳಿಯುತ್ತಿದ್ದಂತೆಯೇ ಕಳಸ ಅರಣ್ಯ ವಲಯದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅರಣ್ಯ ಕಾಯ್ದೆ ಉಲ್ಲಂಘನೆ ಆರೋಪದಡಿಯಲ್ಲಿ ಥಾರ್ ಜೀಪ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಪ್ರವಾಸಿಗರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು