7:04 PM Thursday20 - August 2026
ಬ್ರೇಕಿಂಗ್ ನ್ಯೂಸ್
ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ…

ಇತ್ತೀಚಿನ ಸುದ್ದಿ

ರಾಣೇಬೆನ್ನೂರು | ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ 3 ಮಂದಿ ಸ್ಥಳದಲ್ಲೇ ಸಾವು: ಮೂವರಿಗೆ ಗಾಯ

20/08/2026, 18:56

ಹಾವೇರಿ(reporterkarnataka.com): ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ.
ಮೃತರನ್ನು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆ ನಿವಾಸಿಗಳಾದ ಸಿದ್ದಾರ್ಥ (27), ಹಸನ್ಮುಖಿ (29) ಹಾಗೂ ಯಶೋಧಾ ಬಾಯಿ (51) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಸೌಂದರ್ಯ (26), ಸಿಂಧು (24) ಹಾಗೂ ಒಂದು ವರ್ಷದ ಮಗು ಕಶ್ವಶ್ರೀ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಣೇಬೆನ್ನೂರಿನಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ವೇಳೆ ಚಳಗೇರಿ ಟೋಲ್ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ಮಾಹಿತಿ ತಿಳಿದು ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು