1:45 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸವಾಲು

20/08/2026, 18:58

ಬೆಂಗಳೂರು (reporterkarnataka.com): ವಂದೇ ಮಾತರಂ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿರುವ ಆರ್‌ಎಸ್‌ಎಸ್ ಹಾಗೂ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕಟು ಸವಾಲು ಎಸೆದಿದ್ದಾರೆ.
ಧೈರ್ಯವಿದ್ದರೆ ತಮ್ಮ ಆರ್‌ಎಸ್‌ಎಸ್ ಶಾಖೆಗಳು ಹಾಗೂ ಕಚೇರಿಗಳಲ್ಲಿ ಸಂಘದ ಗೀತೆಯ ಬದಲಿಗೆ ರಾಷ್ಟ್ರಗೀತೆಯನ್ನು ಹಾಡಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (CWC) ನಿರ್ಧಾರದಂತೆ ತಾವು ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವುದಾಗಿ ಸ್ಪಷ್ಟಪಡಿಸಿದರು. ಬಿಜೆಪಿಯವರು ಎಷ್ಟೇ ಕಾನೂನು ತಂದರೂ ಅಥವಾ ಜೈಲಿಗಟ್ಟಿದರೂ ತಾವು ನಿಯಮಿತ ಎರಡು ಚರಣಗಳನ್ನಷ್ಟೇ ಹಾಡುವುದಾಗಿ ಸಮರ್ಥಿಸಿಕೊಂಡರು. ಇದೇ ವೇಳೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಹರಿಪ್ರಸಾದ್, ಬಿಜೆಪಿಯವರು ದೇಶದ್ರೋಹಿಗಳು, ರಣಹೇಡಿಗಳು ಹಾಗೂ ದಲಿತ ವಿರೋಧಿಗಳು ಎಂದು ಕಟುವಾಗಿ ವಿಮರ್ಶಿಸಿದರು. ಕೇವಲ ರಾಜಕೀಯ ಲಾಭಕ್ಕಾಗಿ ವಂದೇ ಮಾತರಂ ವಿಚಾರವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದರು.
ಇದಲ್ಲದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಬಿಜೆಪಿಯವರು ಸ್ವಚ್ಛಗೊಳಿಸಿದ ಘಟನೆಯನ್ನು ಪ್ರಸ್ತಾಪಿಸಿದ ಅವರು, ಬಿಜೆಪಿಗೆ ಎಸ್‌ಸಿ/ಎಸ್‌ಟಿ ಹಾಗೂ ವಾಲ್ಮೀಕಿ ಸಮುದಾಯ ಕಂಡರೆ ಆಗುವುದಿಲ್ಲ ಎಂಬುದಕ್ಕೆ ಇದು ಸ್ಪಷ್ಟ ನಿದರ್ಶನ ಎಂದರು. ಪ್ರಸ್ತುತ ನಡೆಯುತ್ತಿರುವ ವಾಲ್ಮೀಕಿ ನಿಗಮದ ಹಗರಣದ ಹೋರಾಟದ ಹಿನ್ನೆಲೆಯಲ್ಲೂ ರಾಜ್ಯ ರಾಜಕೀಯ ತೀವ್ರಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು