9:50 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

20/08/2026, 19:06

ಚಾಮರಾಜನಗರ(reporterkarnataka.com): ಜಿಲ್ಲೆಯ ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ ಸಂಬಂಧ ಬಗೆದಷ್ಟೂ ಅಚ್ಚರಿಯ ವಿಚಾರಗಳು ಬಯಲಾಗುತ್ತಿವೆ.
ಆಗಸ್ಟ್​​ 14ರ ರಾತ್ರಿ ತಾಂಮ್ರಿಪಲ್ಲಿ ಕಳ್ಳಬೇಟೆ ತಡೆ ಶಿಬಿರದ ಬಳಿ ಫೈರಿಂಗ್​​ ಆಗಿದ್ದು, ಕಾವೇರಿ ವನ್ಯಧಾಮದಲ್ಲಿ ಗುಂಡಿನ ಸದ್ದು ಮೊಳಗಿದೆ ಎಂಬ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗಾರ್ಡ್​​ ಮಾಹಿತಿ ನೀಡಿದ್ದ ಎಂಬುದು ಗೊತ್ತಾಗಿದೆ.

*ಘಟನೆ ನಡೆದ ದಿನ ಆಗಿದ್ದೇನು?:*
ಹೀಗಾಗಿ ಆಗಸ್ಟ್​​ 15ರಂದು ಬೇಟೆಗಾರರು ಮತ್ತು ಕಾಡಿನಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ಇಟ್ಟಿದ್ದರು. ಆ ದಿನಂದೇ ನಾಲ್ವರು ಬೇಟೆಯಾಡಲೆಂದು ಕಾಡಿಗೆ ತೆರಳಿದ್ದರು. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಅಧಿಕಾರಿಗಳು ಧ್ವಜಾರೋಹಣಕ್ಕೆ ತೆರಳಿರುತ್ತಾರೆ ಎಂದು ಇವರು ಭಾವಿಸಿದ್ದರು. ಆದರೆ ಅಂದು ಅರಣ್ಯ ಇಲಾಖೆ ಸಿಬ್ಬಂದಿ ಕಳ್ಳಬೇಟೆ ತಡೆ ಶಿಬಿರದಲ್ಲಿಯೇ ಇದ್ದರು. ಈ ವೇಳೆ ಬೇಟೆಗಾರರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ ಎನ್ನಲಾಗಿದೆ.ಮೃತರ ಪೈಕಿ ಓರ್ವನ ಮೇಲಿವೆ ಕೆಲ ಪ್ರಕರಣ
ಘಟನೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳನ್ನೇ ಟಾರ್ಗೆಟ್​​ ಮಾಡಿ, ಮೃತರ ಕಡೆಯವರು ಇಲಾಖಾ ಕ್ಯಾಂಪ್​​ಗಳನ್ನು ಸ್ಫೋಟಗೊಳಿಸಿದ್ದಾರೆ. ಮಿಂಚಿನಹಳ್ಳಿ , ಭೀಮೇಶ್ವರಿ, ಒಳ್ಳೆಮರದ ಹಟ್ಟಿ, ಬೂದಿಕೆರೆ, ಬಂಡಹಳ್ಳಿ ಮತ್ತು ಕಲಿದೊಡ್ಡಿ ಸೇರಿದಂತೆ ಒಟ್ಟು 6 ಕಡೆ ಕಳ್ಳಬೇಟೆ ತಡೆ ಶಿಬಿರಗಳ ದಾಳಿ ನಡೆಸಲಾಗಿದೆ. ಇನ್ನು ಗುಂಡಿನ ದಾಳಿ ವೇಳೆ ಮೃತಪಟ್ಟಿರುವ ಮೂವರ ಪೈಕಿ ಪೀಟರ್​​ ಮೇಲೆ ಬೇರೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪಗಳಿದ್ದು, ಆತನಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಚರ್ಚ್​​ಗಳಲ್ಲಿ ಆತ 3 ತಿಂಗಳು ಅಡಗಿ ಕುಳಿತಿದ್ದ ಎಂಬ ಮಾಹಿತಿಯೂ ಸಿಕ್ಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು