9:05 PM Thursday15 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ ನೇತೃತ್ವದ ಅಧಿಕಾರಿಗಳ ತಂಡ ದಿಢೀರ್ ದಾಳಿ

20/08/2026, 22:34

ಉಡುಪಿ(reporterkarnataka.com): ಕೃತಕ ರಾಸಾಯನಿಕ ಬಳಸಿ ಬಾಳೆಗೊನೆಗಳನ್ನು ಹಣ್ಣು ಮಾಡುವ ಇಲ್ಲಿಗೆ ಸಮೀಪದ ಅಲೆವೂರಿನ ಗೋದಾಮಿಗೆ ಕುಂದಾಪುರ ಅಸಿಸ್ಟೆಂಟ್ ಕಮಿಷನರ್ ನೇತೃತ್ವದ ತಂಡ ದಾಳಿ ನಡೆಸಿದೆ.
ಬಾಳೆ ಗೊನೆಗಳನ್ನು ಕೃತಕವಾಗಿ ಹಣ್ಣಾಗಿಸಲು ಹಾಗೂ ಆಕರ್ಷಕ ಬಣ್ಣ ನೀಡಲು ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳನ್ನು ಬಳಸಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಉಡುಪಿ ಸಮೀಪದ ಅಲೆವೂರು ಗ್ರಾಮದ ವಿವಿಧ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ಗುರುವಾರ ಅಧಿಕಾರಿಗಳು ಏಕಕಾಲದಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ.


ಕುಂದಾಪುರ ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್.ಆರ್. ಹಾಗೂ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಕೆಸ್ತೂರು ಮತ್ತು ಮಣಿಪಾಲ ಸಮೀಪದ ದುಗ್ಗಿ ಪರಿಸರದಲ್ಲಿರುವ ಬಾಳೆಹಣ್ಣಿನ ರಖಂ ವ್ಯಾಪಾರಸ್ಥರು ಹಾಗೂ ದಾಸ್ತಾನುದಾರರ ಗೋದಾಮುಗಳ ಮೇಲೆ ದಾಳಿ ನಡೆಸಲಾಯಿತು. ದಾಳಿ ವೇಳೆ ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ಬಳಸುತ್ತಿದ್ದ ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕಗಳು, ಕೃತಕ ಬಣ್ಣ ನೀಡಲು ಬಳಸುತ್ತಿದ್ದ ರಾಸಾಯನಿಕಗಳು ಹಾಗೂ ಅವುಗಳನ್ನು ಬಾಳೆಹಣ್ಣಿಗೆ ಅನ್ವಯಿಸಲು ಬಳಸುತ್ತಿದ್ದ ವಿವಿಧ ಪರಿಕರಗಳನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.
ಅಧಿಕಾರಿಗಳು ಗೋದಾಮುಗಳಲ್ಲಿ ಸಂಗ್ರಹಿಸಿಡಲಾಗಿದ್ದ ಬಾಳೆಹಣ್ಣುಗಳ ಪರಿಶೀಲನೆ ನಡೆಸಿ, ಅವುಗಳ ಹಣ್ಣಾಗುವಿಕೆ ಹಾಗೂ ಬಣ್ಣಕ್ಕೆ ಸಂಬಂಧಿಸಿದಂತೆ ಬಳಸಲಾಗುತ್ತಿದ್ದ ವಸ್ತುಗಳ ಮಾದರಿಗಳನ್ನು ಪರಿಶೀಲಿಸಿದ್ದಾರೆ. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವ ರಾಸಾಯನಿಕಗಳ ಬಳಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು, ಸ್ಥಳದಲ್ಲಿದ್ದ ಕೆಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.


ದಾಳಿ ವೇಳೆ ಅಕ್ರಮವಾಗಿ ಅಥವಾ ನಿಯಮಬಾಹಿರವಾಗಿ ರಾಸಾಯನಿಕ ಬಳಕೆ ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಕೃತ್ಯಕ್ಕೆ ಬಳಸಲಾಗುತ್ತಿತ್ತು ಎನ್ನಲಾದ ವಾಹನಗಳನ್ನೂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಬಾಳೆಹಣ್ಣು ಸೇರಿದಂತೆ ಹಣ್ಣುಗಳನ್ನು ನೈಸರ್ಗಿಕವಾಗಿ ಹಣ್ಣಾಗಿಸುವ ಬದಲು ರಾಸಾಯನಿಕಗಳ ಮೂಲಕ ಕೃತಕವಾಗಿ ಹಣ್ಣಾಗಿಸುವುದು ಸಾರ್ವಜನಿಕ ಆರೋಗ್ಯಕ್ಕೆ ಅಪಾಯಕಾರಿಯಾಗುವ ಸಾಧ್ಯತೆ ಇದೆ. ಇಂತಹ ರಾಸಾಯನಿಕಗಳ ಬಳಕೆಯಿಂದ ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇರುವುದರಿಂದ, ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಅಲೆವೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ಈ ದಾಳಿಯಿಂದ ಬಾಳೆಹಣ್ಣು ವ್ಯಾಪಾರಿಗಳಲ್ಲಿ ಆತಂಕ ಮೂಡಿದ್ದು, ಮುಂದಿನ ದಿನಗಳಲ್ಲಿಯೂ ಇಂತಹ ದಿಢೀರ್ ತಪಾಸಣೆಗಳು ಮುಂದುವರಿಯುವ ಸಾಧ್ಯತೆ ಇದೆ. ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸುರಕ್ಷಿತ ಹಣ್ಣುಗಳು ದೊರೆಯುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು