10:35 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಹಾಡಿ ತೋರಿಸಲಿ: ಪ್ರಧಾನಿ ಮೋದಿ ಮತ್ತು ಅಮಿತ್ ಶಾಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸವಾಲು

22/08/2026, 13:19

ಬೆಂಗಳೂರು(reporterkarnataka.com): ವಂದೇ ಮಾತರಂ ಗೀತೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟೆಲಿಪ್ರಾಂಪ್ಟರ್ ನೆರವಿಲ್ಲದೆ ಸಂಪೂರ್ಣ ವಂದೇ ಮಾತರಂ ಗೀತೆಯನ್ನು ಹಾಡಿ ತೋರಿಸಲಿ, ಅವರು ಹಾಗೆ ಮಾಡಿದರೆ ನಾನು ಕ್ಷಣಾರ್ಧದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಗುಡುಗಿದ್ದಾರೆ. ಇತಿಹಾಸ ಮರೆತ ಬಿಜೆಪಿಗೆ ಖರ್ಗೆ ಪಾಠ ವಂದೇ ಮಾತರಂ ಗೀತೆಯ ಕೇವಲ ಎರಡು ಪ್ಯಾರಾಗಳನ್ನು ಮಾತ್ರ ಹಾಡುವ ಕಾಂಗ್ರೆಸ್ ನಿರ್ಧಾರವನ್ನು ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ಇತಿಹಾಸದ ನೆನಪು ಮಾಡಿಕೊಟ್ಟ ಸಚಿವರು,1937ರಲ್ಲೇ ಈ ಬಗ್ಗೆ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ತಿಳಿಸಿದರು.
ಸರ್ದಾರ್ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್ ಹಾಗೂ ರವೀಂದ್ರನಾಥ ಟ್ಯಾಗೋರ್ ಅವರಂತಹ ಮಹಾನ್ ನಾಯಕರೇ ಚರ್ಚಿಸಿ, ಗೀತೆಯ ಮೊದಲ ಎರಡು ಪ್ಯಾರಾಗಳನ್ನು ಮಾತ್ರ ಹಾಡುವ ಸಂಪ್ರದಾಯವನ್ನು ಜಾರಿಗೆ ತಂದಿದ್ದರು. ಅಂದಿನಿಂದ ಇಂದಿನವರೆಗೆ ಇಡೀ ದೇಶ ಇದನ್ನೇ ಅನುಸರಿಸುತ್ತಿದೆ. ಹೀಗಿರುವಾಗ ಬಿಜೆಪಿ ಈಗ ಹೊಸದಾಗಿ ದೇಶಪ್ರೇಮದ ಪಾಠ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.

*ಆರ್‌ಎಸ್‌ಎಸ್‌ ಶಾಖೆಗಳಲ್ಲಿ ವಂದೇ ಮಾತರಂ ಏಕೆ ಹಾಡುವುದಿಲ್ಲ?*
ದೇಶಪ್ರೇಮದ ಬಗ್ಗೆ ಮಾತನಾಡುವ ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಚಿವರು ಕೆಲವು ಪ್ರಶ್ನೆಗಳನ್ನು ಎಸೆದಿದ್ದಾರೆ. ಆರ್‌ಎಸ್‌ಎಸ್‌ ಶಾಖೆಗಳಲ್ಲಿ ‘ನಮಸ್ತೇ ಸದಾ ವತ್ಸಲೇ’ ಎಂದು ಹಾಡುವ ಬದಲು ವಂದೇ ಮಾತರಂ ಗೀತೆಯನ್ನೇ ಹಾಡಲಿ. ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿ, ಕೈಜೋಡಿಸಿ ವಂದೇ ಮಾತರಂ ಹಾಡುವುದನ್ನು ಮೊದಲು ಅವರು ಕಲಿಯಲಿ. ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಪಾತ್ರವಿಲ್ಲದ ಇವರು, ದೇಶಕ್ಕಾಗಿ ಹೋರಾಡಿದ ಬೋಸ್, ನೆಹರೂ, ಪಟೇಲ್ ಅವರ ನಿರ್ಧಾರಗಳನ್ನು ಪ್ರಶ್ನಿಸಲು ಅರ್ಹರೇ ಎಂದು ಖಾರವಾಗಿ ಪ್ರಶ್ನಿಸಿದರು.ನಿಜವಾದ ಸಮಸ್ಯೆಗಳಿಂದ ಗಮನ ಬೇರೆಡೆಗೆ ಸೆಳೆಯುವ ತಂತ್ರ
ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕಲು ಬಿಜೆಪಿ ವಂದೇ ಮಾತರಂ ವಿವಾದವನ್ನು ಮುನ್ನೆಲೆಗೆ ತರುತ್ತಿದೆ ಎಂದು ಆರೋಪಿಸಿದ ಪ್ರಿಯಾಂಕ್ ಖರ್ಗೆ, ದೇಶ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರಕ್ಕೆ ಧೈರ್ಯವಿಲ್ಲ ಎಂದು ಟೀಕಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಯುವಕರ ನಿರುದ್ಯೋಗ ಸಮಸ್ಯೆ, ಕುಸಿಯುತ್ತಿರುವ ಆರ್ಥಿಕ ಪರಿಸ್ಥಿತಿ, ಮಹಿಳೆಯರ ಮೇಲಿನ ದೌರ್ಜನ್ಯ, ಪಿಎಂ ಕೇರ್ಸ್‌ ಫಂಡ್‌ನಲ್ಲಿನ ಪಾರದರ್ಶಕತೆ ಕೊರತೆ ಹಾಗೂ ರಾಮಮಂದಿರ ಚಂದಾ ವಸೂಲಿಯಲ್ಲಿನ ಅವ್ಯವಹಾರಗಳ ಬಗ್ಗೆ ಸರ್ಕಾರ ಉತ್ತರಿಸಲಿ. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸ್ನೇಹದಿಂದಾಗಿ ಭಾರತದ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಎಂಬ ಆರೋಪವಿದೆ, ಇದರ ಬಗ್ಗೆ ಪ್ರಧಾನಿ ಮೌನವೇಕೆ ಎಂದು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು