1:25 AM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ಹೊಳೆನರಸೀಪುರದಲ್ಲಿ ಘೋರ ದುರಂತ: ಆಟವಾಡುತ್ತಾ ಕೀ ಆನ್‌ ಮಾಡಿದ 3 ವರ್ಷದ ಮಗು; ಟ್ರ್ಯಾಕ್ಟರ್‌ ಹರಿದು ತಂದೆ ದಾರುಣ ಸಾವು

23/08/2026, 15:28

ಹಾಸನ(reporterkarnataka.com): ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮೂರು ವರ್ಷದ ಮಗು ಆಟವಾಡುತ್ತಾ ಟ್ರ್ಯಾಕ್ಟರ್‌ನ ಕೀ ಆನ್ ಮಾಡಿದ ಪರಿಣಾಮ, ಏಕಾಏಕಿ ಚಲಿಸಿದ ಟ್ರ್ಯಾಕ್ಟರ್ ತಂದೆಯ ಮೇಲೆ ಹರಿದು ದಾರುಣವಾಗಿ ಮೃತಪಟ್ಟ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.
ಹೊಳೆನರಸೀಪುರ ಪಟ್ಟಣದ ಕೋಟೆ ಒಕ್ಕಲಿಗರ ಬೀದಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.ಮೃತರನ್ನು 37 ವರ್ಷದ ಯಶ್ವಂತ್ ಎಂದು ಗುರುತಿಸಲಾಗಿದೆ. ಅವರು ಸಾರಿಗೆ ಸಂಸ್ಥೆಯಲ್ಲಿ ನೌಕರರಾಗಿದ್ದು, ಅರಕಲಗೂಡು ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಯಶ್ವಂತ್ ಅವರು ಹೊಸ ಮನೆ ನಿರ್ಮಿಸುತ್ತಿದ್ದು, ಆರ್‌ಸಿಸಿ ಕೆಲಸಕ್ಕೆ ಅಗತ್ಯವಿದ್ದ ಸೆಂಟ್ರಿಂಗ್ ಸಾಮಗ್ರಿಗಳನ್ನು ಟ್ರ್ಯಾಕ್ಟರ್‌ನಲ್ಲಿ ತರಿಸಿದ್ದರು. ಈ ವೇಳೆ ತಮ್ಮ ಮೂರು ವರ್ಷದ ಮಗುವನ್ನು ಟ್ರ್ಯಾಕ್ಟರ್ ಮೇಲೆ ಕೂರಿಸಿಕೊಂಡು ಆಟವಾಡಿಸುತ್ತಿದ್ದರು ಎನ್ನಲಾಗಿದೆ. ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ಟ್ರ್ಯಾಕ್ಟರ್‌ನ ಕೀ ಆನ್ ಮಾಡಿದೆ. ಪರಿಣಾಮ ಟ್ರ್ಯಾಕ್ಟರ್ ಏಕಾಏಕಿ ಮುಂದಕ್ಕೆ ಚಲಿಸಿದೆ. ಮಗು ಕೆಳಗೆ ಬೀಳಬಹುದು ಎಂದು ಆತಂಕಗೊಂಡ ಯಶ್ವಂತ್, ಮಗುವನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಚಲಿಸುತ್ತಿದ್ದ ಟ್ರ್ಯಾಕ್ಟರ್‌ನ ಚಕ್ರ ಅವರ ಮೇಲೆ ಹರಿದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಯಶ್ವಂತ್ ಅವರನ್ನು ಕೂಡಲೇ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮಾಹಿತಿ ತಿಳಿದು ಹೊಳೆನರಸೀಪುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು