10:45 AM Monday24 - August 2026
ಬ್ರೇಕಿಂಗ್ ನ್ಯೂಸ್
ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು

ಇತ್ತೀಚಿನ ಸುದ್ದಿ

ಹೆತ್ತವರನ್ನು ಕೊಲ್ಲುತೇ ನೆಂದು ಬೆದರಿಸಿ 9ನೇ ಕ್ಲಾಸ್ ವಿದ್ಯಾರ್ಥಿನಿಯ ಅತ್ಯಾಚಾರ: ವೇಣೂರಿನಲ್ಲಿ ಆಟೋ ಚಾಲಕ ಬಂಧನ

24/08/2026, 08:00

ಮಂಗಳೂರು(reporterkarnataka.com):ಒಂಬತ್ತನೇ ಕ್ಲಾಸ್ ಕಲಿಯುತ್ತಿರುವ 14 ವರ್ಷದ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಹೆತ್ತವರನ್ನು ಕೊಲ್ಲುತ್ತೇನೆಂದು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಆಟೋ ರಿಕ್ಷಾ ಚಾಲಕ ಜಮಾಲುದ್ದೀನ್ ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ವೇಣೂರು ನಿವಾಸಿ ಆರೋಪಿ ಜಮಾಲುದ್ದೀನ್ ತನ್ನ ಆಟೋರಿಕ್ಷಾದಲ್ಲಿ 14 ವರ್ಷದ ಬಾಲಕಿಯನ್ನು ಕಳೆದ ಕೆಲವು ತಿಂಗಳುಗಳಿಂದ ಶಾಲೆಗೆ ಕರೆದೊಯ್ಯುತ್ತಿದ್ದ. ಈ ವೇಳೆ ಆಕೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪಿಯನ್ನು ಬಾಲಕಿ ವಿರೋಧಿಸಿದಾಗ, ಜೀವ ಬೆದರಿಕೆ ಒಡ್ಡುತ್ತಿದ್ದ. ಇದರಿಂದ ಭೀತಿಗೊಳಗಾಗಿದ್ದ ಬಾಲಕಿ ಈ ವಿಷಯವನ್ನು ಯಾರಿಗೂ ತಿಳಿಸಿರಲಿಲ್ಲ. ಇತ್ತೀಚೆಗೆ ಆಗಸ್ಟ್ 13ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಮನೆಗೆ ಅಕ್ರಮವಾಗಿ ನುಗ್ಗಿದ ಆರೋಪಿ ಜಮಾಲುದ್ದೀನ್, ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಸಂತ್ರಸ್ತ ಬಾಲಕಿ ಆಗಸ್ಟ್ 15ರಂದು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS 2023) ಕಲಂ 75(2), 64(1), 65(1), 351(3) ಹಾಗೂ ಪೋಕ್ಸೊ ಕಾಯ್ದೆ (POCSO Act 2012) ಕಲಂ 4(2), 8, 12 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು