6:47 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು ಮಂದಾರಬೈಲಿನಲ್ಲಿ ಕೋಲ ಸೇವೆ

24/08/2026, 11:01

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್ ಸಂಕಷ್ಟದಿಂದ ಪಾರಾಗಲು ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ತುಳುನಾಡಿನ ದೈವದ ಮೊರೆ ಹೋಗಿದ್ದಾರೆ.


ದರ್ಶನ್ ವಿರುದ್ಧ ಅವರ ಆಪ್ತ ಪ್ರದೋಷ್ ಮಾಫಿ ಸಾಕ್ಷಿಯಾಗುವ ಸಾಧ್ಯತೆಗಳ ಬೆನ್ನಲ್ಲೇ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ತುಳುನಾಡಿನ ಕಾರಣಿಕ ದೈವವಾದ ದೇರೆಬೈಲ್ ಕೊಂಚಾಡಿ ಸಮೀಪದ
ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತೆ ಹಾಗೂ ಗುಳಿಗ ದೈವದ ಸನ್ನಿಧಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಪತಿ ದರ್ಶನ್ ಅವರು ಕಾನೂನು ರೀತಿಯ ಎಲ್ಲ ಸಂಕಷ್ಟಗಳಿಂದ ಪಾರು ಮಾಡುವಂತೆ ಪ್ರಾರ್ಥಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ವಿಜಯಲಕ್ಷ್ಮಿ ಅವರು ಮಂದಾರಬೈಲಿನ ದೈವಗಳಿಗೆ ಕೋಲ ಸೇವೆ ನಡೆಸಿ ದೈವಾನುಗ್ರಹ ಕೋರಿದ್ದಾರೆ. ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸುವುದರ ಜೊತೆಗೆ ಪತಿಯ ಮೇಲಿರುವ ಸಂಕಷ್ಟಗಳು ದೂರವಾಗಲೆಂದು ಹರಕೆ ಸೇವೆ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು