4:04 AM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

25/08/2026, 19:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನದ ಹಬ್ಬ ಹಾಗೂ ಹೊಸಕ್ಕಿ ಹಬ್ಬವನ್ನು ಕ್ರೈಸ್ತರೂ ಪೂರ್ವ ಕಾಲದಿಂದಲೂ ಆಚರಿಸುತ್ತಿದ್ದು ಈ ಹಬ್ಬಕ್ಕೆ ಒಂದು ದಿನದ ಸ್ಥಳೀಯ ರಜೆಯನ್ನು ಸರ್ಕಾರ ಘೋಷಣೆ ಮಾಡಬೇಕು ಎಂದು ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ದಿ ನಿಗಮದ ನಿರ್ದೇಶಕ ಹರ್ಷ ಮೆಲ್ವಿನ್ ಲಸ್ರಾದೊ ಒತ್ತಾಯಿಸಿದ್ದಾರೆ.
ಅವರು ಪತ್ರಿಕೆ ಹೇಳಿಕೆಯಲ್ಲಿ ಹಿಂದಿನಿಂದಲೂ ಕ್ರೈಸ್ತರು ರಾಜ್ಯದಾದ್ಯಂತ ಮಾತೆ ಮರಿಯಮ್ಮನವರ ಹಬ್ಬವನ್ನು ಭಕ್ತಿ ಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸುತ್ತಾರೆ. ಆದರೊಂದಿಗೆ ಕ್ರೈಸ್ತರ ಸಂಸ್ಕೃತಿ ಮೆರೆಯುವ ಹೊಸಕ್ಕಿ ಹಬ್ಬವನ್ನಾಗಿಯೂ ಆಚರಿಸಲಾಗುತ್ತದೆ. ಹಬ್ಬದ ಪ್ರಯುಕ್ತ ಒಂಬತ್ತು ದಿನಗಳ ಕಾಲ ಬಾಲಿಕಾ ಮರಿಯಮ್ಮನವರ ಪ್ರತಿಮೆಗೆ ಹೂ ಅರ್ಪಿಸಿ ನೋವೇನಾ ಪ್ರಾರ್ಥನೆಯನ್ನು ನೆರವೇರಿಸಲಾಗುತ್ತದೆ. ಈ ಹಬ್ಬಕ್ಕೆ ಯಾವುದೇ ಸರ್ಕಾರಿ ರಜೆಯಾಗಲೀ ಅಥವಾ ಸ್ಥಳೀಯ ರಜೆಯಾಗಲಿ ಇಲ್ಲ. ರಾಜ್ಯದಾದ್ಯಂತ ಹಾಗೂ ವಿಶೇಷವಾಗಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕ್ರೈಸ್ತ ಸಮುದಾಯದವರು ಹೆಚ್ಚಾಗಿ ನೆಲೆಸಿರುವ ಜಿಲ್ಲೆಗಳಾಗಿದ್ದು ಕ್ರೈಸ್ತರ ಭಾವನೆಗಳಿಗೆ ಬೆಲೆ ನೀಡಿ ಸೆಪ್ಟೆಂಬರ್ 8 ರಂದು ರಾಜ್ಯದಾದ್ಯಂತ ಒಂದು ದಿನದ ಸ್ಥಳೀಯ ಅಥವಾ ಸಾರ್ವತ್ರಿಕ ರಜೆಯನ್ನು ಸರ್ಕಾರವು ಘೋಷಣೆ ಮಾಡಿ ಮಾತೆ ಮರಿಯಮ್ಮನವರ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಅನುವು ಮಾಡಿ ಕೊಡಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು