6:08 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮೊಂತಿ ಫೆಸ್ತ್ ಗೆ ಸಿದ್ಧತೆ: ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ 9 ದಿನಗಳ ನೊವೇನಾ ಪ್ರಾರ್ಥನೆ ಆರಂಭ

31/08/2026, 18:07

ಮಂಗಳೂರು(reporterkarnataka.com): ಕರಾವಳಿಯ ಕ್ಯಾಥೊಲಿಕ್ ಕ್ರೈಸ್ತರು ಸಪ್ಟೆಂಬರ್ 8 ರಂದು ಮೇರಿ ಮಾತೆಯ ಜನ್ಮ ದಿನದ ಪ್ರಯುಕ್ತ ಮೊಂತಿ ಫೆಸ್ತ್ ಆಚರಿಸುತ್ತಿದ್ದು, ಅದರ ಅಂಗವಾಗಿ 9 ದಿನಗಳ ನೋವೇನಾ ಪ್ರಾರ್ಥನೆ ಆಗಸ್ಟ್ 30 ರಂದು ಭಾನುವಾರ ಆರಂಭವಾಗಿದೆ.
ನೋವೇನಾ ಸಂದರ್ಭ ಮೊದಲಿಗೆ ಬಲಿ ಪೂಜೆ ಹಾಗೂ ಬಳಿಕ ಮಕ್ಕಳು ವಿವಿಧೆಡೆಗಳಿಂದ ಸಂಗ್ರಹಿಸಿ ತಂದ ಹೂವುಗಳನ್ನು ಮೇರಿ ಮಾತೆಗೆ ಗಾಯನದೊಂದಿಗೆ ಭಕ್ತಿ ಪೂರ್ವಕವಾಗಿ ಅರ್ಪಿಸಲಾಗುತ್ತದೆ.
ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಮೊದಲ ದಿನದ ನೋವೇನಾವನ್ನು ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ನಡೆಸಿ ಕೊಟ್ಟರು.
ಸಕ್ಕಡ್ ಸಾಂಗಾತಾ ಮೇಳ್ಯಾಂ, ಸಕ್ಕಡ್ ಲಾಗಿಂ ಸರ್ಯಾಂ, ಆಮ್ಚೆ ತಾಳೆ ಏಕ್ ಕರ್ಯಾಂ, ಮರಿಯೆಕ್ ಹೊಗೊಳ್ಸಿಯಾಂ ಎಂಬ ಜನಪ್ರಿಯ ಕೊಂಕಣಿ ಭಕ್ತಿ ಗೀತೆಯೊಂದಿಗೆ ನೋವೇನಾ ಆರಂಭವಾಯಿತು. ಚರ್ಚ್ ನ ಸಹಾಯಕ ಧರ್ಮ ಗುರು ವಂದನೀಯ ಫಾ. ಜೋಸೆಫ್ ಕುವೆಲ್ಲೊ, ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ರೋಷನ್ ಮೊಂತೇರೊ, ಸರ್ವ ಆಯೋಗಗಳ ಸಂಯೋಜಕ ವಿಲಿಯಂ ಲೋಬೊ, ಆಧ್ಯಾತ್ಮಿಕ ಸಮಿತಿಯ ಸಂಚಾಲಕ ಆಸ್ಟಿನ್ ಮೊಂತೇರೊ ಮುಂತಾದವರು ಉಪಸ್ಥಿತರಿದ್ದರು. ನೋವೇನಾ ಪ್ರಾರ್ಥನೆಯ ಬಳಿಕ ಮಕ್ಕಳಿಗೆ ಸಿಹಿ ತಿಂಡಿ ಹಂಚಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು