7:16 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಬಾಹ್ಯಾಕಾಶದಲ್ಲಿ ಘಟಿಸಲಿದೆ ಅಪರೂಪದ ಘಟನೆ: ಮೇ 26ರಂದು ಚಂದ್ರ ಗ್ರಹಣ ಮತ್ತು ಸೂಪರ್ ಮೂನ್

25/05/2021, 10:51

ನವದೆಹಲಿ(reporterkarnataka news):  ಬಾಹ್ಯಾಕಾಶದಲ್ಲಿ ಮೇ 26ರಂದು ಅಪರೂಪದ ಘಟನೆ ನಡೆಯಲಿದೆ. ಪ್ರಸಕ್ತ ವರ್ಷದ ಮೊದಲ ಚಂದ್ರಗ್ರಹಣ ಮತ್ತು  ‘ಸೂಪರ್‌ಮೂನ್‌’ ಅಂದು ಗೋಚರವಾಗಲಿದೆ. ಚಂದ್ರ ಗ್ರಹಣ ಮತ್ತು ಕೆಂಪು ಚಂದ್ರನನ್ನು ಅಂದು ಏಕಕಾಲಕ್ಕೆ ವೀಕ್ಷಿಸಬಹುದಾಗಿದೆ.

ಚಂದ್ರ ಅಂದು ಭೂಮಿಯಿಂದ ಅತೀ ಸಮೀಪದಲ್ಲಿ ಗೋಚರಿಸಲಿದ್ದಾನೆ. ಇದರಿಂದ ಚಂದ್ರ ಸಾಮಾನ್ಯಕ್ಕಿಂತಲೂ ಹೆಚ್ಚು ದೊಡ್ಡದಾಗಿ ಕಾಣಿಸುತ್ತಾನೆ. ಚಂದ್ರನನ್ನು ಭೂಮಿಯ ನೆರಳು ಸಂಪೂರ್ಣವಾಗಿ ಆವರಿಸಿಕೊಳ್ಳುವುದರಿಂದ ಅಂದು ಗ್ರಹಣ ಕೂಡ ಸಂಭವಿಸಲಿದೆ. ಆದರೆ ಚಂದ್ರ ಸಂಪೂರ್ಣ ಕಪ್ಪಗಾಗುವುದಿಲ್ಲ. ಬದಲಾಗಿ, ಕೆಂಪು ಬಣ್ಣ ಕಾಣಿಸಿಕೊಳ್ಳುತ್ತದೆ. ಆದ್ದರಿಂದ, ಸಂಪೂರ್ಣ ಚಂದ್ರ ಗ್ರಹಣವನ್ನು ಕೆಂಪು ಅಥವಾ ರಕ್ತ ಚಂದ್ರ ಎಂದು ಕರೆಯಲಾಗುತ್ತದೆ ಎಂದು ವಿಜ್ಞಾನಿಗಳು ಹೇಳುತ್ತಾರೆ.

ಆಸ್ಟ್ರೇಲಿಯಾ, ಜಪಾನ್‌, ಅಮೆರಿಕ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ‘ಸೂಪರ್‌ಮೂನ್‌’ ದರ್ಶನವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು