4:35 PM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಪೋಸ್ಟಿಂಗ್‌ಗಾಗಿ ಲಕ್ಷಾಂತರ ರೂ. ಡೀಲ್ ಆರೋಪ: ಪಿಎಸ್‌ಐಗಳ ಆಡಿಯೋ ಸಂಭಾಷಣೆ ವೈರಲ್​​; ಮೂವರು ಖಾಕಿಗಳ ತಲೆದಂಡ

01/09/2026, 15:49

ಕಾರವಾರ(reporterkarnataka.com): ಪೊಲೀಸ್ ಠಾಣೆಯ ಪ್ರಮುಖ ಪೋಸ್ಟಿಂಗ್‌ಗಾಗಿ ಲಕ್ಷಾಂತರ ರೂ ಡೀಲ್ ಹಾಗೂ ಮೇಲಾಧಿಕಾರಿಗಳಿಗೆ ಮಾಸಿಕ ಹಫ್ತಾ ನೀಡುವ ಕುರಿತು ಸ್ವತಃ ಪಿಎಸ್‌ಐಗಳೇ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಂಭಾಷಣೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತಲ್ಲಣ ಸೃಷ್ಟಿಸಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಕರ್ತವ್ಯಲೋಪ ಹಾಗೂ ಶಿಸ್ತು ಉಲ್ಲಂಘನೆ ಆರೋಪದಡಿ ಮೂವರು ಪಿಎಸ್‌ಐಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

*ಏನಿದು ಪ್ರಕರಣ?*
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ‌ ಪೊಲೀಸ್ ಠಾಣೆಯ ಒಂದು ಹುದ್ದೆ ಇದೀಗ ಇಡೀ ಪೊಲೀಸ್ ಇಲಾಖೆಯಲ್ಲಿ ಸಂಚಲನ ಸೃಷ್ಟಿಸಿದೆ. ಹಳಿಯಾಳ ಠಾಣೆಯ ಲಾ ಆ್ಯಂಡ್​ ಆರ್ಡರ್ ಪಿಎಸ್​ಐ ಕಿರಣ್ ಪಾಟೀಲ್, ಕ್ರೈಂ ಪಿಎಸ್​ಐ ಕೃಷ್ಣ ಅರಿಕೆರೆ ಹಾಗೂ ಈ ಹಿಂದೆ ಹಳಿಯಾಳದಲ್ಲಿ ಪಿಎಸ್​ಐ ಆಗಿದ್ದ ಮುಂಡಗೋಡ ಪಿಎಸ್​ಐ ವಿನೋದ್ ರೆಡ್ಡಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ.
ಈ ಆಡಿಯೋವನ್ನು ಜೆಡಿಎಸ್​ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಆಡಿಯೋದಲ್ಲಿ ಪೊಲೀಸ್ ಇಲಾಖೆಯೊಳಗಿನ ಪೋಸ್ಟಿಂಗ್‌ಗಾಗಿ ಹಣ ನೀಡುವ ಬಗ್ಗೆ ಮಾತನಾಡಲಾಗಿದೆ. ಅಷ್ಟೇ ಅಲ್ಲದೆ ಮೇಲಾಧಿಕಾರಿಗಳಿಗೆ ತಿಂಗಳಾ ಹಪ್ತಾ ವಸೂಲಿ ಮಾಡಿಕೊಡಬೇಕು ಎಂಬ ವಿಚಾರವೂ ಚರ್ಚೆಯಾಗಿದೆ.

*ಕಾನ್ಫರೆನ್ಸ್ ಕಾಲ್​​ನಲ್ಲಿ ಮಾತುಕತೆ:*
ಇನ್ನು ಈ ಪ್ರಕರಣದ ಹಿನ್ನೆಲೆಯೂ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಹಿಂದೆ ಹಳಿಯಾಳ ಪೊಲೀಸ್ ಠಾಣೆಯ PSI ಆಗಿದ್ದ ಬಸವರಾಜ್ ಮದನೂರು ಅವರನ್ನು ರೌಡಿಶೀಟರ್ ಮಚ್ ಮಂಜಾ ರಂಪಾಟದ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದಡಿ ಅಮಾನತು ಮಾಡಲಾಗಿತ್ತು. ಸುಮಾರು ಎರಡು ತಿಂಗಳ ಹಿಂದೆ ನಡೆದ ಈ ಅಮಾನತಿನಿಂದ ಹಳಿಯಾಳ ಠಾಣೆಯ PSI ಹುದ್ದೆ ತೆರವಾಗಿತ್ತು. ಈ ಸ್ಥಾನಕ್ಕೆ ಈ ಹಿಂದೆ ಹಳಿಯಾಳ ಠಾಣೆಯ ಕ್ರೈಂ ವಿಭಾಗದಲ್ಲಿ PSI ಆಗಿ ಕೆಲಸ ಮಾಡಿದ್ದ ವಿನೋದ್ ರೆಡ್ಡಿ ಮತ್ತೆ ಬರಲು ಸಾಕಷ್ಟು ಪ್ರಯತ್ನ ನಡೆಸಿದ್ದರು ಎಂಬ ಆರೋಪ ಕೇಳಿಬಂದಿದೆ. ಆದರೆ ಅಂತಿಮವಾಗಿ ದಾಂಡೇಲಿ ಠಾಣೆಯ PSI ಆಗಿದ್ದ ಕಿರಣ್ ಪಾಟೀಲ್ ಅವರನ್ನು ಹಳಿಯಾಳ ಠಾಣೆಗೆ ನಿಯೋಜನೆ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು