1:02 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ

01/09/2026, 20:47

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ತುಮಕೂರು-ರಾಯದುರ್ಗ ಹಾಗೂ ಚಿತ್ರದುರ್ಗ ಭಾಗದ ಪ್ರಮುಖ ರೈಲು ಮಾರ್ಗಗಳ ಕಾಮಗಾರಿಗಳ ವೇಗ ವೃದ್ಧಿಸಲಾಗಿದ್ದು, 2027ರ ಡಿಸೆಂಬರ್‌ ಅಂತ್ಯದ ವೇಳೆಗೆ ಯೋಜನೆಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗುವುದು
ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ವಿವಿಧ ರೈಲ್ವೇ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಮೃತ ಭಾರತ ಸ್ಟೇಷನ್‌ ಯೋಜನೆಯಡಿ ಚಿತ್ರದುರ್ಗ ಹಾಗೂ ಚಿಕ್ಕಜಾಜೂರು ರೈಲು ನಿಲ್ದಾಣಗಳನ್ನು ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ನುಡಿದರು.
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಶೇ 92ರಷ್ಟು ಭೂಸ್ವಾಧೀನ ಪೂರ್ಣಗೊಂಡಿದ್ದು, ಬಾಕಿ ಭೂಮಿ ಸಿಕ್ಕರೆ ಮುಂದಿನ ಒಂದೂವರೆ ವರ್ಷದಲ್ಲಿ ಕಾಮಗಾರಿ ಮುಗಿಸಿ ರೈಲು ಸಂಚಾರ ಆರಂಭಿಸಲಾಗುವುದು. ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ಶೇ 100ರಷ್ಟು ರೈಲ್ವೆ ವಿದ್ಯುದ್ದೀಕರಣ ಪೂರ್ಣಗೊಳ್ಳಲಿದ್ದು, ರಾಜ್ಯದ 62 ರೈಲು ನಿಲ್ದಾಣಗಳ ಅಭಿವೃದ್ಧಿ ಸೇರಿದಂತೆ ವಿವಿಧ ಯೋಜನೆಗಳಿಗೆ 52,000 ಕೋಟಿ ರೂಪಾಯಿಗೂ ಹೆಚ್ಚು ಅನುದಾನ ನೀಡಲಾಗಿದೆ ಎಂದರು.
ಜಿಲ್ಲೆಯ ಬಹು ವರ್ಷಗಳ ಕನಸಿನ ಯೋಜನೆಯಾದ ತುಮಕೂರು – ಚಿತ್ರದುರ್ಗ – ದಾವಣಗೆರೆ ನೂತನ ನೇರ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಈಗಾಗಲೇ ಶೇ. 92ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಬಾಕಿ ಶೇಕಡಾ 8 ಭೂಮಿಯನ್ನು ಜಿಲ್ಲಾಡಳಿತ ಹಸ್ತಾಂತರಿಸಿದರೆ, ಮುಂದಿನ ಒಂದೂವರೆ ವರ್ಷದಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ದೇಶಾದ್ಯಂತ ರೈಲ್ವೆ ವಿದ್ಯುದ್ದೀಕರಣ ಶೇ.99ರಷ್ಟು ಪೂರ್ಣಗೊಂಡಿದ್ದು, ಈ ವರ್ಷದೊಳಗೆ ಶೇ 100 ಪ್ರಗತಿ ಸಾಧಿಸಿ ವಿಶ್ವ ದಾಖಲೆ ಬರೆಯಲಾಗುವುದು. ಕುಕ್ಕೆ ಸುಬ್ರಹ್ಮಣ್ಯ ಮಾರ್ಗದ ವಿದ್ಯುದ್ದೀಕರಣ ಕಾರ್ಯ 2 ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಡಿಸೆಂಬರ್‌ ವೇಳೆಗೆ ಶೇ 100ರಷ್ಟು ರೈಲ್ವೆ ವಿದ್ಯುದ್ದೀಕರಣ ಸಾಧಿಸಿದ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲಿದೆ ಎಂದು ವಿ.ಸೋಮಣ್ಣ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು