8:55 PM Monday19 - October 2026
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ…

ಇತ್ತೀಚಿನ ಸುದ್ದಿ

ಆಹಾರ ಸುರಕ್ಷತೆ | ಮುಂದಿನ ದಿನಗಳಲ್ಲಿ ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮೈಸೂರು ನಗರಗಳಲ್ಲಿ ತೀವ್ರ ತಪಾಸಣೆ: ಸಚಿವ ಖಾದರ್

02/09/2026, 20:06

ಮಂಗಳೂರು(reporterkarnataka.com): ಆಹಾರ ಇಲಾಖೆ ಮುಂದಿನ ದಿನಗಳಲ್ಲಿ ಹುಬ್ಬಳ್ಳಿ, ಬೆಳಗಾವಿ, ಮಂಗಳೂರು, ಮೈಸೂರು ನಗರದಲ್ಲಿ ಆಹಾರ ಸುರಕ್ಷತೆ ಬಗ್ಗೆ ಹೋಟೆಲ್, ಬೇಕರಿ, ಪಿಜಿ ಕೇಂದ್ರಗಳ ತೀವ್ರ ತಪಾಸಣೆ ಮಾಡಲಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು.
ಆಹಾರ ಇಲಾಖೆಯಿಂದ ಬೇಕರಿ ಗಳ ಮೇಲೆ ದಾಳಿ ವಿಚಾರವಾಗಿ ನಗರದಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು, ಎರಡು ಘಟಕಗಳನ್ನು ಬಂದ್ ಮಾಡಿ ಇತರ ಘಟಕಗಳಿಗೆ ನೋಟಿಸ್ ಕೊಡಲಾಗಿದೆ ಎಂದರು.
ಈಗಾಗಲೇ ಕ್ಲೀನ್ ಮಾಡಿ ಸ್ವಚ್ಛತೆ ಇಟ್ಟುಕೊಳ್ಳಬೇಕು. ಯಾರೂ ಇನ್ಫುಲೆನ್ಸ್ ಮಾಡಿದ್ರೂ ಕಾಪಾಡೋಕೆ ಆಗಲ್ಲ. ಕ್ಯೂ ಆರ್ ಕೋಡ್ ಮೂಲಕ ಮಾಹಿತಿ ಬಂದ್ರೆ ಅಧಿಕಾರಿಗಳು ತಪಾಸಣೆ ಮಾಡುತ್ತಾರೆ ಸಚಿವರು ನುಡಿದರು.
ಪಿಜಿ ನಡೆಸುವವರೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು. ಯಾರೂ ಗ್ರಾಹಕರಿಗೆ ಮೋಸ ಮಾಡಬಾರದು.
ಪ್ರಥಮ ಬಾರಿಗೆ ದಂಡವನ್ನು ವಿಧಿಸುತ್ತೇವೆ. ಮುಂದಿನ ಬಾರಿ ಯಾವುದೇ ಕ್ಷಮೆ ನೀಡೋದಿಲ್ಲ ಎಂದು ಸಚಿವರು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು