11:16 AM Sunday18 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ ಯು.ಟಿ. ಖಾದರ್ ತರಾಟೆ

02/09/2026, 20:11

ಮಂಗಳೂರು(reporterkarnataka.com): ಬೇರೆ ಬೇರೆ ಅಧಿಕೃತ ಸಂಸ್ಥೆ ಇರುವಾಗ ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡಬೇಕು? ಶಾಸಕರುಗಳು ಯಾಕೆ ಅವರಿಗೆ ಗುತ್ತಿಗೆ ಕೊಡೋದು? ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಪ್ರಶ್ನಿಸಿದ್ದಾರೆ.
ಕೆಆರ್ ಐಡಿಎಲ್ ಅಧಿಕಾರಿಗಳ ವಿರುದ್ಧ ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಮಾಡಿದ ಸುಲಿಗೆ ಆರೋಪದ ಬಗ್ಗೆ ಸಚಿವರು ಪ್ರತಿಕ್ರಿಯಿಸಿದರು.
ಕೆಆರ್ ಡಿಎಲ್ ಯಾಕೆ ಗುತ್ತಿಗೆ ಕೊಡುತ್ತೀರಾ?
ಸ್ವತಃ ನಾನು ಪಿಡಬ್ಲ್ಯುಡಿ ಇಲಾಖೆಗೆ ಟೆಂಡರ್ ಕೊಡೋದು. ಈ ಸಂಸ್ಥೆಗೆ ಯಾಕೆ ಟೆಂಡರ್ ಕೊಡಬೇಕು. ಕೆ ಆರ್ ಐ ಡಿ ಎಲ್ ನಲ್ಲಿ ಸಿಬ್ಬಂದಿ ಕೊರತೆ ಇದೆ ಎಂದರು.
ನಾಲ್ಕೈದು ಬಾರಿ ಗೆದ್ದಾಗ ಮಾತ್ರ ಪ್ರಬುದ್ಧತೆ ಬರುತ್ತದೆ.
ಯಾರೋ ಬಂದು ದೂರು ನೀಡಿದ ಕೂಡಲೇ ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ.
ಆದರೆ ಇವರಿಗೆ ಮಾಹಿತಿ ನೀಡಿದವರೇ ಸರಿ ಇಲ್ಲ ಅನ್ನೋದು ತನಿಖೆಯಲ್ಲಿ ಗೊತ್ತಾಗುತ್ತದೆ. ಆದರೂ ಅಶೋಕ್ ಕುಮಾರ್ ರೈ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು