ಇತ್ತೀಚಿನ ಸುದ್ದಿ
ಬಾಗಲಕೋಟೆ ಮುಗಳೊಳ್ಳಿ ತಾಂಡಾ ಸರಕಾರಿ ಶಾಲೆ ಛಾವಣಿ ಕುಸಿತ: ಅದೃಷ್ಟವಶಾತ್ ಎಲ್ಲ ಮಕ್ಕಳು ಸುರಕ್ಷಿತ
02/09/2026, 20:19
ಬಾಗಲಕೋಟೆ(reporterkarnataka.com): ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಮಕ್ಕಳ ಮೇಲೆ ಶಾಲೆಯ ಮೇಲ್ಚಾವಣಿಯ ಕಾಂಕ್ರೀಟ್ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಕ್ಷಣವೇ ಚಿಕಿತ್ಸೆ ಒದಗಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (CEO) ತಿಳಿಸಿದ್ದಾರೆ.





*ಮಕ್ಕಳು ಸುರಕ್ಷಿತ*: ಘಟನೆಯಲ್ಲಿ ಗಾಯಗೊಂಡಿರುವ ಆರೂ (06) ಮಕ್ಕಳು ಸಂಪೂರ್ಣ ಸುರಕ್ಷಿತವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಒದಗಿಸಲಾಗುತ್ತಿದೆ.
*ತಕ್ಷಣದ ರಿಪೇರಿಗೆ ಸೂಚನೆ*: ಶಾಲೆಯ ಕುಸಿದಿರುವ ಛಾವಣಿಯನ್ನು ತಕ್ಷಣವೇ ದುರಸ್ತಿಗೊಳಿಸಲು ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗಕ್ಕೆ (PRED) ಸ್ಪಷ್ಟ ನಿರ್ದೇಶನ ನೀಡಲಾಗಿದೆ.
*ಸ್ಥಳದಲ್ಲಿ ಹಿರಿಯ ಅಧಿಕಾರಿಗಳು*: ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (DDPI) ಖುದ್ದಾಗಿ ಆಸ್ಪತ್ರೆಯಲ್ಲಿದ್ದು, ಮಕ್ಕಳ ಆರೋಗ್ಯ ಸ್ಥಿತಿ ಹಾಗೂ ಚಿಕಿತ್ಸೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಶಾಲೆ ಶಿಥಿಲಾವಸ್ಥೆಯಲ್ಲಿರುವುದನ್ನು ಗಮನಿಸಿರುವ ಪೋಷಕರು ಶಾಶ್ವತ ದುರಸ್ತಿ ಹಾಗೂ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು, ಆಡಳಿತ ಮಂಡಳಿಯು ದುರಸ್ತಿ ಕಾರ್ಯವನ್ನು ತುರ್ತಾಗಿ ಪೂರ್ಣಗೊಳಿಸಲು ಕ್ರಮ ವಹಿಸುತ್ತಿದೆ ಎಂದು ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಗಜಾನನ ಬಾಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














