11:05 PM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Puttur | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ; ಅವಾಚ್ಯ ಪದಗಳಿಂದ ನಿಂದನೆ; ಕರ್ತವ್ಯಕ್ಕೆ ಅಡ್ಡಿ: ಕೇಸು ದಾಖಲು

05/09/2026, 21:28

ಪುತ್ತೂರು(reporterkarnataka.com):ಪುತ್ತೂರು ಗ್ರಾಮಾಂತರ ಠಾಣಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ಬೈದು ಸರಕಾರಿ ಕೆಲಸಕ್ಕೆ ಅಡ್ಡಿ ಉಂಟು ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ಹೆಚ್ ಸಿ ಮಧು ಹಾಗೂ ಸಿಪಿಸಿ ಭೀಮನ ಗೌಡ ಎಮ್ ಬಿರಾದರ್ ಎಂಬವರುಗಳು, ಸೆ. 4ರಂದು ರಾತ್ರಿ ವೇಳೆ ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದಾಗ, ಬಂದ ದೂರನ್ನು ಸ್ವೀಕರಿಸಿಕೊಂಡು ಪುತ್ತೂರು ಪಡ್ನೂರು ಗ್ರಾಮ ಮುಂಡಾಜೆ ಎಂಬಲ್ಲಿಗೆ ತೆರಳಿದ್ದಾರೆ. ಅಲ್ಲಿ ಮಹಿಳೆಯೋರ್ವರು ತನ್ನ ಗಂಡ ತನಗೆ ಹಲ್ಲೆ ನಡೆಸಿರುವುದಾಗಿ ತಿಳಿಸಿದ್ದು, ಈ ಬಗ್ಗೆ ನವೀನ್ ಎಂಬವರ ಬಳಿ ವಿಚಾರಿಸಿದಾಗ, ಆತನು ಕೋಪಗೊಂಡು ತನ್ನ ಪತ್ನಿಗೆ ಹಲ್ಲೆ ನಡೆಸಲು ಯತ್ನಿಸಿರುತ್ತಾನೆ. ಈ ವೇಳೆ ತಡೆಯಲು ಹೋದ ಪೊಲೀಸ್ ಸಿಬ್ಬಂದಿಗಳಿಗೆ ನವೀನ್, ಆತನ ತಾಯಿ ಮತ್ತು ಸಹೋದರ ಸೇರಿ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 107/2026, ಕಲಂ :352,132,121(1) ,ಜೊತೆಗೆ 3(5) ಬಿ.ಎನ್.ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಪ್ರಕರಣದ ಆರೋಪಿತ ನವೀನ್ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನು ಚಿಕಿತ್ಸೆಯಿಂದ ಬಿಡುಗಡೆಗೊಂಡ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು