10:19 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅನುಮಾನ ಮೂಡಿಸಿದ ಕೂಡ್ಲಿಗಿ ಅಮ್ಮನಕೇರಿ ಕರಡಿಗಳ ಸಾವು: ಸೂಕ್ತ ತನಿಖೆಗೆ ಜಿಲ್ಲಾಡಳಿತಕ್ಕೆ ಒತ್ತಾಯ

23/09/2021, 07:48

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕು ಅಮ್ಮನಕೇರಿ ಗ್ರಾಮದ ಹೊರವಲಯದಲ್ಲಿ,ಕರಡಿ ಮೃತಪಟ್ಟಿದ್ದು ಕಾರಣ ತಿಳಿದು ಬಂದಿಲ್ಲ. ಕಳೆದ ತಿಂಗಳ ಹಿಂದೆಯಷ್ಟೇ ಕರಡಿಯೊಂದು ಹಾಗೂ ಕೆಲ ತಿಂಗಳ ಹಿಂದೆ ಒಂದು ಕರಡಿ, ಹೀಗೆ ಎರಡು ವರ್ಷಗಳಲ್ಲಿ  ಮೂರು ಕರಡಿಗಳು ಮೃತಪಟ್ಟಿರುವ ಘಟನೆಗಳು ಬೆಳಕಿಗೆ ಬಂದಿದ್ದು, ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿದೆ.

ಕರಡಿ ಧಾಮ ನಿರ್ಮಾಣವಾಗಿದ್ದರೂ ಕೂಡ ಈ ರೀತಿ ವನ್ಯ ಪ್ರಾಣಿಗಳ ಸಾವಿನ ಪ್ರಕರಣಗಳು ಆಗಾಗ್ಗೆ ಜರುಗುತ್ತಿದ್ದು, ಈ ಅಹಿತಕರ ಬೆಳವಣಿಗೆ  ಹತ್ತಾರು ಅನುಮಾನಗಳು ಮೂಡುತ್ತಿವೆ. ಜಿಲ್ಲಾಡಳಿತ ಶೀಘ್ರವೇ ತನಿಖೆ ನಡೆಸಬೇಕು ಹಾಗೂ ವನ್ಯ ಜೀವಿಗಳ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಶೀಘ್ರವೇ ಹಮ್ಮಿಕೊಳ್ಳುಬೇಕೆಂದು ಭಾರತ ಕಮ್ಯೂನಿಷ್ಟ್ ಪಕ್ಷದ ಕಾರ್ಯದರ್ಶಿ ಎಚ್.ವೀರಣ್ಣ ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಅಧ್ಯಕ್ಷ ವಿ.ಜಿ.ವೃಷಭೇಂದ್ರ ಈ ಮೂಲಕ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.

ಅಮ್ಮನಕೇರಿ ಗ್ರ‍ಾಮಸ್ಥರು ಹಾಗೂ ಮೊರಬನಹಳ್ಳಿ ಸದಸ್ಯ ಕರಿಯಪ್ಪ ಹಾಗೂ ಗ್ರಾಮದ ಮುಖಂಡರು, ತಾಲೂಕಿನ ವಿವಿದ ಸಂಘಟನೆಗಳ ಪದಾಧಿಕಾರಿಗಳು ಈ ಮೂಲಕ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು