12:39 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ನೂತನ ‘ಬಿ’ ಬ್ಲಾಕ್ ಉದ್ಘಾಟನೆ

11/09/2026, 22:41

ಬೆಂಗಳೂರು(reporterkarnataka.com): ಬನ್ನೇರುಘಟ್ಟ ರಸ್ತೆಯ ಕಳೇನ ಅಗ್ರಹಾರದಲ್ಲಿರುವ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ನೂತನ ‘ಬಿ’ ಬ್ಲಾಕ್ ಆವರಣವನ್ನು ಸೆ. 5ರಂದು ಉದ್ಘಾಟಿಸಲಾಯಿತು.
ರಾಜ್ಯದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು. ಬೆಂಗಳೂರು ಧರ್ಮಪ್ರಾಂತ್ಯದ ಆರ್ಚ್‌ಬಿಷಪ್ ಅತಿ ವಂದನೀಯ ಡಾ. ಪೀಟರ್ ಮಚಾಡೊ ಆಶೀರ್ವಚನ ನೀಡಿದರು. ಕರ್ನಾಟಕ ಜೆಸ್ಯೂಟ್ ಪ್ರಾಂತ್ಯದ ಪ್ರಾಂತಾಧಿಕಾರಿ ಹಾಗೂ ವಿಶ್ವವಿದ್ಯಾಲಯದ ಕುಲಪತಿ ಫಾ. ಡಯೋನಿಸಿಯಸ್ ವಾಜ್, ಉಪಕುಲಪತಿ ಫಾ. ಡಾ. ವಿಕ್ಟರ್ ಲೋಬೋ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ ಶಿಸ್ತು ಮತ್ತು ನೈತಿಕ ಮೌಲ್ಯಗಳಿಗೆ ಮಹತ್ವ ನೀಡುತ್ತಿದ್ದು, ಶೈಕ್ಷಣಿಕ ಜ್ಞಾನದ ಜತೆಗೆ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಇಂತಹ ಮೌಲ್ಯಗಳು ಅಗತ್ಯ ಎಂದರು.
ಆರ್ಚ್‌ ಬಿಷಪ್ ಪೀಟರ್ ಮಚಾಡೊ ಮಾತನಾಡಿ, ಆರ್ಥಿಕವಾಗಿ ಹಿಂದುಳಿದವರು ಹಾಗೂ ಶಿಕ್ಷಣ ಪಡೆಯಲು ಸಾಧ್ಯವಾಗದವರಿಗೂ ಅವಕಾಶ ಕಲ್ಪಿಸುವುದು ವಿಶ್ವವಿದ್ಯಾಲಯದ ಪ್ರಮುಖ ಧ್ಯೇಯವಾಗಿದೆ ಎಂದರು.


ಉಪಕುಲಪತಿ ಫಾ. ಡಾ. ವಿಕ್ಟರ್ ಲೋಬೋ, ನೂತನ ಆವರಣವು ವಿದ್ಯಾರ್ಥಿಗಳ ಜ್ಞಾನ, ನಾವೀನ್ಯತೆ ಮತ್ತು ಹೊಸ ಆಲೋಚನೆಗಳಿಗೆ ವೇದಿಕೆಯಾಗಬೇಕು ಎಂದು ಆಶಿಸಿದರು.
ಸಮಾರಂಭದಲ್ಲಿ ‘ಬಿ’ ಬ್ಲಾಕ್‌ನ ಶಿಲಾನ್ಯಾಸ ಫಲಕವನ್ನು ಗಣ್ಯರು ಅನಾವರಣಗೊಳಿಸಿದರು. ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು