ಇತ್ತೀಚಿನ ಸುದ್ದಿ
ಮಂಗಳೂರಿನಲ್ಲಿ ಇಂದು ರಫ್ತುದಾರರ ಸಮಾವೇಶ
23/09/2021, 08:05
ಮಂಗಳೂರು (reporterkarnataka.com.):- ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ವಾಣಿಜ್ಯ ಸಪ್ತಾಹ “ರಫ್ತುದಾರರ ಸಮಾವೇಶ” ಕಾರ್ಯಕ್ರಮವನ್ನು ಸೆಪ್ಟೆಂಬರ್ 23ರ ಮಧ್ಯಾಹ್ನ 3.30 ಗಂಟೆಗೆ ನಗರದ ಓಷಿಯನ್ ಪರ್ಲ್ ಹೋಟೆಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬೆಂಗಳೂರು ವಿಟಿಪಿಸಿಯ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಎಸ್.ಆರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರು ಸೀಮಾ ಸುಂಕದ ಆಯುಕ್ತ ಇಮಾಮುದ್ದೀನ್ ಅಹಮ್ಮದ್, ಎಂ.ಆರ್.ಪಿಲ್.ಎಲ್‍ನ ವ್ಯವಸ್ಥಾಪಕ ನಿರ್ದೇಶಕ ಎಮ್.ವೆಂಕಟೇಶ್, ಲೀಡ್ ಬ್ಯಾಂಕ್‍ನ ಜನರಲ್ ಮ್ಯಾನೇಜರ್ ಬಿ.ಯೋಗೀಶ್ ಆಚಾರ್ಯ ಹಾಗೂ ಮತ್ತಿತರರರು ಭಾಗವಹಿಸಲಿದ್ದಾರೆ.