8:05 PM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ತುಂಬೆಯ ಮೆಡಿಸಿಟಿಗೆ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಭೇಟಿ: ಗಲ್ಫ್ ಮೆಡಿಕಲ್ ಯೂನಿವರ್ಸಿಟಿ ವಿಶ್ವದ ಅತ್ಯುತ್ತಮ ವೈದ್ಯಕೀಯ ವಿವಿಗಳಲ್ಲಿ ಒಂದು: ಕೆ.ಜೆ. ಜಾರ್ಜ್ ಶ್ಲಾಘನೆ

15/09/2026, 19:57

ಅಜ್ಮಾನ್(reporterkarnataka.com): ರಾಜ್ಯ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು ಇಂದು ತುಂಬೆ ಮೆಡಿಸಿಟಿಗೆ ಅಧಿಕೃತ ಭೇಟಿ ನೀಡಿದರು. ಇದು ಆರೋಗ್ಯ ರಕ್ಷಣೆ, ವೈದ್ಯಕೀಯ ಶಿಕ್ಷಣ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಕರ್ನಾಟಕ ಮತ್ತು ಯುಎಇ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿತು. ಅಜ್ಮಾನ್‌ನಲ್ಲಿರುವ ತುಂಬೆ ಗ್ರೂಪ್‌ನ ಪ್ರಮುಖ ಆರೋಗ್ಯ ಮತ್ತು ಶೈಕ್ಷಣಿಕ ಕ್ಯಾಂಪಸ್‌ನಲ್ಲಿ ಸಚಿವರನ್ನು ಡಾ. ತುಂಬೆ ಮೊಯ್ದೀನ್ ಹಾಗೂ ಗುಂಪಿನ ನಾಯಕತ್ವದ ತಂಡವು ಸ್ವಾಗತಿಸಿತು.
ಭೇಟಿಯ ಸಂದರ್ಭದಲ್ಲಿ, ಸಚಿವ ಜಾರ್ಜ್ ಅವರು ತುಂಬೆ ಮೆಡಿಸಿಟಿಯ ಪ್ರಮುಖ ಸೌಲಭ್ಯಗಳಾದ ಗಲ್ಫ್ ಮೆಡಿಕಲ್ ಯೂನಿವರ್ಸಿಟಿ, ತುಂಬೆ ಯೂನಿವರ್ಸಿಟಿ ಆಸ್ಪತ್ರೆ ಮತ್ತು ತುಂಬೆ ಪುನರ್ವಸತಿ ಆಸ್ಪತ್ರೆಗಳಿಗೆ ಭೇಟಿ ನೀಡಿದರು. ಕಳೆದ ಎರಡು ದಶಕಗಳಲ್ಲಿ ತುಂಬೆ ಗ್ರೂಪ್ ನಿರ್ಮಿಸಿರುವ ವೈದ್ಯಕೀಯ ಶಿಕ್ಷಣ, ಚಿಕಿತ್ಸಾ ಸೌಲಭ್ಯ ಮತ್ತು ಸಂಶೋಧನಾ ಮೂಲಭೂತ ಸೌಕರ್ಯಗಳ ಪ್ರಮಾಣ ಹಾಗೂ ಗುಣಮಟ್ಟವನ್ನು ಅವರು ನೇರವಾಗಿ ವೀಕ್ಷಿಸಿದರು. ಯುಎಇಯ ಆರೋಗ್ಯ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಭಾರತೀಯ ಸಮುದಾಯದ ಪ್ರಮುಖ ಪ್ರತಿನಿಧಿಗಳಾದ ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಆರೋಗ್ಯ ವೃತ್ತಿಪರರೊಂದಿಗೆ ಸಚಿವರು ಸಂವಾದ ನಡೆಸಿದರು.

ತುಂಬೆ ಗ್ರೂಪಿನ ಭಾಗವಾಗಿರುವ ಗಲ್ಫ್ ಮೆಡಿಕಲ್ ಯೂನಿವರ್ಸಿಟಿಯು ವಿಶ್ವದ ಅತ್ಯುತ್ತಮ ಹಾಗೂ ಅತ್ಯಂತ ಗೌರವಾನ್ವಿತ ವೈದ್ಯಕೀಯ ವಿಶ್ವವಿದ್ಯಾಲಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿದೆ. ಇದು 111ಕ್ಕೂ ಹೆಚ್ಚು ರಾಷ್ಟ್ರೀಯತೆಗಳ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿದ್ದು, ಇಲ್ಲಿಂದ ತೇರ್ಗಡೆಯಾದ ವೈದ್ಯಕೀಯ ವೃತ್ತಿಪರರು ಕರ್ನಾಟಕ ಹಾಗೂ ಭಾರತದ ಇತರ ಭಾಗಗಳವರನ್ನು ಒಳಗೊಂಡಂತೆ ಜಗತ್ತಿನಾದ್ಯಂತ ಸೇವೆ ಸಲ್ಲಿಸುತ್ತಿದ್ದಾರೆ. ಸಚಿವರ ಈ ಭೇಟಿಯು ಕರ್ನಾಟಕದ ಆರೋಗ್ಯ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳು ಮತ್ತು ತುಂಬೆ ಗ್ರೂಪಿನ ಜಾಗತಿಕ ವಿಸ್ತರಣೆಯ ನಡುವೆ ಹೊಸ ಸಹಕಾರದ ಹಾದಿಗಳನ್ನು ಮುರೆಯಲಿದೆ ಎಂದು ನಿರೀಕ್ಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು