10:06 PM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು | ಕೆಡಿಪಿ ಸಭೆಗೆ ಪೊಲೀಸ್ ಕಮಿಷನರ್ ಗೈರು: ಸಚಿವ ಯು.ಟಿ.ಖಾದರ್ ಗರಂ

15/09/2026, 22:05

ಮಂಗಳೂರು(reporterkarnataka.com): ಮಂಗಳೂರಿನ ಜಿ‌ಪಂನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಗೆ ಮಂಗಳೂರು ಪೊಲೀಸ್ ಕಮಿಷನರ್ ಗೈರುಹಾಜರಾಗಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಗರಂ ಆಗಿದ್ದಾರೆ.
ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ
ತಮ್ಮ ಬದಲಿಗೆ ಡಿಸಿಪಿ ಸ್ಯಾಂ ವರ್ಗೀಸ್ ಅವರನ್ನು ಸಭೆಗೆವಕಳುಹಿಸಿದ್ದರು. ಇದರಿಂದ ಆಕ್ರೋಶಗೊಂಡ ಸಚಿವ ಖಾದರ್ ಅವರು ಕಮಿಷನರ್ ಅವರು ಗೈರು ಆಗಿರುವುದಕ್ಕೆ ಅನುಮತಿ ಪಡೆದಿದ್ದಾರ?
ಕಾನೂನು ಪಾಠ ಮಾಡ್ತಾರೆ.. ಅವರಿಗೆ ಕಾನೂನು ಅನ್ವಯಿಸೋದಿಲ್ವಾ? ಅಂತಾ ಗರಂ ಆಗಿದ್ದಾರೆ.
ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ವಾಸ್ತವದಲ್ಲಿ ದಕ್ಷ ಪೊಲೀಸ್ ಅಧಿಕಾರಿ. ಮಂಗಳೂರು ಮತ್ತು ಸುತ್ತಮುತ್ತಲಿನ ಕಮಿಷನರೇಟ್ ಪ್ರದೇಶದಲ್ಲಿ ಡ್ರಗ್ಸ್ ಹಾವಳಿಯನ್ನು ಮಟ್ಟ ಹಾಕುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಈ ದಕ್ಷ ಪೊಲೀಸ್ ಅಧಿಕಾರಿಯ ವರ್ಗಾವಣೆಗೆ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ಎರಡು ಕಡೆಯಿಂದಲೂ ಕಳೆದ ಒಂದು ವರ್ಷದಿಂದ ಸಾಕಷ್ಟು ಪ್ರಯತ್ನ ನಡೆಯುತ್ತಿದೆ. ಸುಧೀರ್ ರೆಡ್ಡಿ ಕೆಡಿಪಿ ಸಭೆಗೆ ಗೈರು ಹಾಜರಾದರೂ ಅವರೊಬ್ಬ ದಕ್ಷ ಅಧಿಕಾರಿ ಎನ್ನುವುದು ಕರಾವಳಿಯ ಪ್ರಜ್ಞಾವಂತ ನಾಗರಿಕರ ಅನಿಸಿಕೆ.

ಇತ್ತೀಚಿನ ಸುದ್ದಿ

ಜಾಹೀರಾತು