7:46 PM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಮತ್ತೆ 23 ತಾಲ್ಲೂಕುಗಳು ಬರಪೀಡಿತ ಎಂದು ರಾಜ್ಯ ಸರಕಾರ ಘೋಷಣೆ

17/09/2026, 19:17

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿದ್ದು, ರಾಜ್ಯದ 17 ಜಿಲ್ಲೆಗಳ ಹೆಚ್ಚುವರಿ 53 ತಾಲೂಕುಗಳಲ್ಲಿ ತಕ್ಷಣದಿಂದಲೇ ‘ಗ್ರೌಂಡ್ ಟ್ರೂತಿಂಗ್’ ಬೆಳೆ ಹಾನಿ ಕ್ಷೇತ್ರ ಪರಿಶೀಲನೆ) ಕೈಗೊಳ್ಳುವಂತೆ ಕಂದಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಹತ್ವದ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರದ ಬರ ನಿರ್ವಹಣಾ ಕೈಪಿಡಿ-2020ರ ಮಾರ್ಗಸೂಚಿ ಅನ್ವಯ, ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಜೂನ್ 1 ರಿಂದ ಸೆಪ್ಟೆಂಬರ್ 16 ರವರೆಗೆ ನಡೆಸಿದ ಸಮಗ್ರ ವೈಜ್ಞಾನಿಕ ಬರ ಮೌಲ್ಯಮಾಪನದಲ್ಲಿ ಈ 53 ತಾಲೂಕುಗಳು ಪರಿಶೀಲನೆಗೆ ಅರ್ಹತೆ ಪಡೆದಿವೆ. ಸೆಪ್ಟೆಂಬರ್ 16 ರಂದು ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ನೀಡಿದ ಸೂಚನೆಯ ಮೇರೆಗೆ ಪ್ರಾಧಿಕಾರದ ಆಯುಕ್ತರಾದ ಹೊನ್ನಾಂಬ ಎಸ್. ಅವರು ಈ ಸಂಬಂಧ ಅಧಿಸೂಚನೆ ಪ್ರಕಟಿಸಿದ್ದಾರೆ.

*ಈಗಾಗಲೇ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ*
ರಾಜ್ಯದಲ್ಲಿ ಈ ಹಿಂದೆ ಕೈಗೊಂಡ ಹಂತ-1ರ ಗ್ರೌಂಡ್ ಟ್ರೂತಿಂಗ್ ವರದಿ ಆಧಾರದ ಮೇಲೆ ಆಗಸ್ಟ್ 27 ರಂದು ಒಟ್ಟು 101 ತಾಲೂಕುಗಳನ್ನು ಅಧಿಕೃತವಾಗಿ ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿತ್ತು. ಅವುಗಳಲ್ಲಿ 89 ತಾಲೂಕುಗಳು ‘ತೀವ್ರ ಬರ’ ಹಾಗೂ 12 ತಾಲೂಕುಗಳು ‘ಮಧ್ಯಮ ಬರ’ ಪೀಡಿತ ಎಂದು ವರ್ಗೀಕರಿಸಲಾಗಿತ್ತು. ನಂತರ ಎರಡನೇ ಹಂತದಲ್ಲಿ ಗುರುತಿಸಲಾದ 24 ತಾಲೂಕುಗಳಲ್ಲಿ ಕ್ಷೇತ್ರ ಪರಿಶೀಲನೆ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ. ಇದೀಗ ಮೂರನೇ ಹಂತದಲ್ಲಿ ಉಳಿದ ತಾಲೂಕುಗಳ ಪೈಕಿ ಮತ್ತೆ 53 ತಾಲೂಕುಗಳಲ್ಲಿ ಬೆಳೆ ನಷ್ಟ ಪರಿಶೀಲನೆ ನಡೆಯಲಿದೆ.

*ಸಮೀಕ್ಷೆಯ ವೇಳಾಪಟ್ಟಿ ಪ್ರಕಟ: ಸೆಪ್ಟೆಂಬರ್ 21ಕ್ಕೆ ಅಂತಿಮ ವರದಿ*
ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಿಗೆ ಕೂಡಲೇ ಕಾರ್ಯಪ್ರವೃತ್ತರಾಗಲು ನಿರ್ದೇಶನ ನೀಡಲಾಗಿದ್ದು, ನಿಗದಿತ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು