9:20 PM Thursday17 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಉಮರ್ ಖಾಲಿದ್‌ನಂಥ ಆರೋಪಿಯ ದೇಶಭಕ್ತ ಎನ್ನುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಶಾಸಕ ಡಾ. ಭರತ್ ಶೆಟ್ಟಿ ಕಿಡಿ

17/09/2026, 21:19

ಮಂಗಳೂರು(reporterkarnataka.com): ಸೆಪ್ಟೆಂಬರ್ 2026ರಲ್ಲಿ ಬೆಂಗಳೂರಿನ ಎನ್‌ಎಲ್‌ಎಸ್‌ಐಯುನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದಾಗ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು “ಉಮರ್ ಖಾಲಿದ್ ದೇಶಭಕ್ತ, ಗೋಡ್ಸೆಯನ್ನು ಆರಾಧಿಸುವ ಎಬಿವಿಪಿಗೆ ಮಾತನಾಡುವ ನೈತಿಕ ಹಕ್ಕಿಲ್ಲ” ಎಂದು ಹೇಳಿರುವುದು ಖಂಡನೀಯ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿ ಗಲಭೆ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ಜೈಲು ಸೇರಿರುವ, ಸುಪ್ರೀಂ ಕೋರ್ಟ್‌ನಿಂದಲೂ ಜಾಮೀನು ಸಿಗದ ವ್ಯಕ್ತಿಯನ್ನು ದೇಶಭಕ್ತ ಎಂದು ಕರೆಯುವುದು ಕಾಂಗ್ರೆಸ್‌ನ ದೇಶವಿರೋಧಿ ಮನಸ್ಥಿತಿ ಮತ್ತು ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ದೇಶವನ್ನು ಒಡೆಯಲು ಹೊರಟವರ ಪರ ನಿಲ್ಲುವ ಕಾಂಗ್ರೆಸ್‌ನ ತುಕ್ಡೆ-ತುಕ್ಡೆ ನೀತಿ ಮತ್ತೊಮ್ಮೆ ಬಟಾಬಯಲಾಗಿದೆ.
ದೇಶಭಕ್ತ ಯುವಶಕ್ತಿಯನ್ನು ಅವಮಾನಿಸುವ ಹರಿಪ್ರಸಾದ್ ಕ್ಷಮೆ ಯಾಚಿಸಬೇಕು. ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಡಾ. ಶೆಟ್ಟಿ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು