2:58 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಬೆಂಗಳೂರು | ಕಿಡ್ನ್ಯಾಪ್‌, ಅಡ್ಡಾದಿಡ್ಡಿ ಕಾರು ಚಾಲನೆ: ಅಪಹರಣದ ವೇಳೆ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ

18/09/2026, 14:58

ಗಿರಿಧರ್ ಕೊಂಪುಳಿರ ಬೆಂಗಳೂರು

info.reporterkarnataka@gmail.com

ರಾಜಸ್ಥಾನ ಮೂಲದ ಮಹಿಳೆಯನ್ನು ಕಾರಿನಲ್ಲಿ ಅಪಹರಣ ಮಾಡಿದ್ದ ಆರೋಪಿಗಳು ಆಕೆಗೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತೆ ದೂರು ನೀಡಿದ್ದಾರೆ.
ರಾಜಸ್ಥಾನದ ಪಾಲಿ ಜಿಲ್ಲೆ ಮೂಲದ ಮಹಿಳೆ ಪೂಜಾ ಮತ್ತು ಈಕೆಯ ಪತಿ ಓಂ ಪ್ರಕಾಶ್‌ ಒಂದೇ ಗ್ರಾಮದವರಾಗಿದ್ದಾರೆ. ಸುಮಾರು 4 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ, ಪೋಷಕರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಫೆಬ್ರವರಿಯಲ್ಲಿ ಪಾಲಿ ಜಿಲ್ಲೆಯ ಕೋರ್ಟ್‌ನಲ್ಲಿ ಇಬ್ಬರು ಮದುವೆ ಯಾಗಿದ್ದರು. ನಂತರ ಪೋಷಕರ ಪ್ರಾಣ ಭಯದಿಂದ ಚಾಮರಾಜಪೇಟೆಯಲ್ಲಿರುವ ಓಂಪ್ರಕಾಶ್‌ ಸಹೋದರನ ಮನೆಯಲ್ಲಿ ವಾಸವಾಗಿದ್ದರು. 10 ದಿನಗಳ ಹಿಂದಷ್ಟೇ ಅಗ್ರಹಾರ ದಾಸರಹಳ್ಳಿಯಲ್ಲಿ ಬಾಡಿಗೆ ಮನೆಗೆ ಸ್ಥಳಾಂತರಗೊಂಡಿದ್ದರು.
ಈ ವಿಚಾರ ತಿಳಿದ ಪೂಜಾಳ ಸೋದರ ಅತ್ತೆ ಪಾಣಿದೇವಿ ನಾಲ್ಕೈದು ಮಂದಿ ಯುವಕರನ್ನು ಕಳುಹಿಸಿ ಪೂಜಾಳನ್ನು ಕರೆತರಲು ಸೂಚಿಸಿದ್ದರು. ಅದರಂತೆ ಆರೋಪಿಗಳು ಸೆ.16ರಂದು ಸಂಜೆ ಪೂಜಾಳ ಮನೆಗೆ ಬಂದು ಒಬ್ಬಳೇ ಇದ್ದ ಆಕೆ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಕೂರಿಸಿಕೊಂಡು ಅಪಹರಿಸಿದ್ದಾರೆ. ನಂತರ ಕಾರಿನಲ್ಲಿ ಕರೆದೊಯ್ಯುವಾಗ ಆರೋಪಿಗಳ ಪೈಕಿ ಒಬ್ಟಾತ ಪೂಜಾಳ ಕೈಗೆ ಮುತ್ತುಕೊಟ್ಟು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ, ಸೋದರ ಅತ್ತೆ ಪಾಣಿದೇವಿಗೆ ವಿಡಿಯೋ ಕರೆ ಮಾಡಿ, ಕರೆತರುವುದಾಗಿ ಮಾಹಿತಿ ನೀಡಿದ್ದಾನೆ. ಈ ವೇಳೆ ಪಾಣಿದೇವಿ ನಮ್ಮಹುಡುಗರ ಜತೆ ಮನೆಗೆ ಬರಬೇಕು. ಇಲ್ಲವಾದರೆ ನಿನ್ನ ಪತಿಯನ್ನು ಹತ್ಯೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾಳೆ ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ.
ಆ ನಂತರ ಆರೋಪಿಗಳು ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದು, ಕಾರಿನ ಹಿಂಬದಿ ಸೀಟ್‌ನಲ್ಲಿದ್ದ ಆರೋಪಿಯೊಬ್ಬ ಯಾರೇ ಬಂದರೂ ಕಾರನ್ನು ನಿಲ್ಲಿಸ ಬೇಡ. ಅಡ್ಡ ಬಂದರೆ ಗುದ್ದಿಕೊಂಡು ಹೋಗುವಂತೆ ಸೂಚಿಸಿದ್ದ. ಹೀಗಾಗಿ ಕಾರು ಚಾಲಕ ಸದ್ದಾಂ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿ, ಪೊಲೀಸ್‌ ವಾಹನ, ನ್ಯಾಯಾಧೀಶರ ವಾಹನ ಸೇರಿ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ.
ಪರಿಣಾಮ ಪೃಥ್ವಿರಾಜ್‌ (12), ಯಶಿಕಾ (9), ಅಮೂಲ್‌ (35), ಮಣಿ (64), ಜಯಲಕ್ಷ್ಮೀ (57), ಸಂತೋಷ್‌ (33) ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಜಯಲಕ್ಷ್ಮೀ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪರಿಸ್ಥಿತಿ ಚಿಂತಾಜನಕವಾಗಿದೆ.
ಜನರು ಥಳಿಸಿದ್ದರಿಂದ ಆರೋಪಿಗಳು ತೀವ್ರ ಅಸ್ವಸ್ಥ
ಹೊಸಹಳ್ಳಿ ಬಳಿ ಕಾರು ಅಡ್ಡಗಟ್ಟಿದ ಸ್ಥಳೀಯರು ಕಾರಿನ ಮೇಲೆ ಕಲ್ಲುಗಳ ಎತ್ತಿ ಹಾಕಿ, ದುಷ್ಕರ್ಮಿಗಳನ್ನು ಹಿಡಿದು ಹಿಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾರ್ವಜನಿಕರ ಹಲ್ಲೆಯಿಂದ ಆರೋಪಿಗಳು ತೀವ್ರ ಅಸ್ವಸ್ಥರಾಗಿದ್ದಾರೆ. ಅವರಿಗೂ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಿದ್ದಾರೆ.

*ದಾರಿ ತಿಳಿಯದೆ ವಿಚಲಿತಗೊಂಡಿದ್ದ ಕಾರು ಚಾಲಕ*
ಮಹಿಳೆಯ ಅಪಹರಣ ಮತ್ತು ಸರಣಿ ಅಪಘಾತ ಪ್ರಕರಣ ಸಂಬಂಧ ಮಾಗಡಿ ರಸ್ತೆ ಠಾಣೆ ಪೊಲೀಸರು ಗಾಯಾಳುಗಳ ಹೇಳಿಕೆ ದಾಖಲಿಸಿದ್ದಾರೆ. ಜತೆಗೆ ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ದುಷ್ಕರ್ಮಿಗಳು ಪೂಜಾ ಎಂಬ ಮಹಿಳೆಯನ್ನು ಅಪಹರಣ ಮಾಡಿದ ಬಳಿಕ ಸರಿಯಾಗಿ ದಾರಿ ತಿಳಿಯದೆ ವಿಚಲಿತಗೊಂಡಿದ್ದರು. ನಗರದಲ್ಲಿನ ಬೀದಿಗಳ ದಾರಿ ಗೊತ್ತಾಗದೇ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ್ದಾರೆ. ಒಮ್ಮೆ ಗುದ್ದಿದ ಮೇಲೆ ಸಿಕ್ಕಿ ಬಿದ್ದರೆ ಕಷ್ಟ ಎಂದು ಭಾವಿಸಿ ಕಾರು ನಿಲ್ಲಿಸದೇ ಭಯದಲ್ಲಿ ಸರಣಿ ಅಪಘಾತ ಮಾಡಿದ್ದಾರೆ. ಹೀಗೆ ಸುಮಾರು 6-8 ಕಿ.ಮೀ. ಸುತ್ತಮುತ್ತ ಅಡ್ಡಾದಿಡ್ಡಿ ಚಾಲನೆ ಮಾಡಿ ಪೊಲೀಸರ ಜೀಪ್‌, ನ್ಯಾಯಾಧೀಶರ ಕಾರು ಸೇರಿ 20 ಹೆಚ್ಚು ಕಾರುಗಳಿಗೆ ಹಾಗೂ ಹತ್ತಾರು ಬೈಕ್‌ ಗಳಿಗೆ ಗುದ್ದಿ ಪರಾರಿಯಾಗಲು ಯತ್ನಸಿದ್ದಾರೆ. ಈ ವೇಳೆ ಸಿನಿಮೀಯ ರೀತಿಯಲ್ಲಿ ಸ್ಥಳೀಯರು, ದುಷ್ಕರ್ಮಿಗಳ ಕಾರನ್ನು ಹಿಂಬಾಲಿಸಿಕೊಂಡು ಬಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು