10:42 PM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ; ವೈಭವದ ಶೋಭಾಯಾತ್ರೆ: ಓಂಕಾರ ನಗರದಿಂದ ಶ್ರೀ ಮಹಮ್ಮಾಯಿ ಕೆರೆವರೆಗೆ ಮೆರವಣಿಗೆ

18/09/2026, 22:31

ಮಂಗಳೂರು(reporterkarnataka.com): ಸಂಸ್ಕಾರಯುತ ಹಿಂದೂ ಸಮಾಜವನ್ನು ಒಟ್ಟು ಮಾಡಲು ಗಣೇಶೋತ್ಸವ ಪ್ರೇರಣೆಯಾಗಿದೆ. ಬಂಟ್ಸ್ ಹಾಸ್ಟೇಲ್ ನಲ್ಲಿ ನಡೆಯುವ ಶ್ರೀ ಗಣೇಶೋತ್ಸವ ಶಿಸ್ತುಬದ್ದವಾಗಿ ನಡೆಯುತ್ತಿದ್ದು, ಎಲ್ಲರಿಗೂ ಮಾದರಿಯಾಗಿದೆ. ಶಾಸಕನಾಗಿ ನಾನು ಬಂಟ ಸಮಾಜದೊಟ್ಟಿಗೆ ಯಾವತ್ತೂ ನಾನಿದ್ದೇನೆ. ನನಗೆ ಬಂಟ ಸಮಾಜದ ಋಣ ಇದೆ‌ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ನುಡಿದರು.
ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್ ನಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ ರೋಗ ರುಜಿನ ದೂರ ಮಾಡಲು, ಜೀವನದಲ್ಲಿ ಶಾಂತಿ ನೆಮ್ಮದಿ ಕಾಣಲು ಗಣೇಶನ ಆರಾಧನೆ ಅಗತ್ಯ. ಬಂಟ್ಸ್ ಹಾಸ್ಟೇಲ್ ನ ಗಣೇಶೋತ್ಸವ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಗಣೇಶೋತ್ಸವಗಳಿಗೂ ಮಾದರಿಯಾಗಿದೆ. ಭಜನೆ ಹರಿಕೀರ್ತನೆಯೊಂದಿಗೆ ಸಾಗುವ ಶೋಭಾಯಾತ್ರೆಯನ್ನು ಕಣ್ತುಂಬಿ ನೋಡುವುದೇ ಆನಂದ.‌ ಬಂಟ್ಸ್ ಹಾಸ್ಟೇಲ್ ನಲ್ಲಿ ಆದಷ್ಟು ಬೇಗ ವಾಣಿಜ್ಯ ಸಂಕೀರ್ಣ ನಿರ್ಮಾಣ ಆಗಲಿ, ಅಜಿತ್ ಕುಮಾರ್ ರೈ ಮಾಲಾಡಿ, ಕೆ ಪ್ರಕಾಶ್ ಶೆಟ್ಟಿ, ಡಾ ಮೋಹನ್ ಆಳ್ವ ಎಲ್ಲರೂ ಜೊತೆಯಾಗಿ ಕೆಲಸ ಮಾಡಿದಾಗ ಇದು ಸಾಧ್ಯವಾಗುತ್ತದೆ. ಕಟ್ಟಡ ನಿರ್ಮಾಣ ಕನಸಾಗಿ ಉಳಿಯದೆ ನನಸಾಗ ಬೇಕು. ನಾವೆಲ್ಲರೂ ಅವರೊಂದಿಗೆ ಇರುತ್ತೇವೆ ಎಂದರು.
ಸಮಾರಂಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಎಂ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಜೊತೆ ಕಾರ್ಯದರ್ಶಿ ಪದ್ಮನಾಭ ಶೆಟ್ಟಿ ಪುಂಚಮೆ, ಉದ್ಯಮಿ ಸುಯೋಗ್ ಶೆಟ್ಟಿ, ಮಾಜಿ ಸಚಿವ ಬಿ ನಾಗರಾಜ ಶೆಟ್ಟಿ, ಡಾ ಸತ್ಯ ಕೃಷ್ಣ ಭಟ್, ರಘುರಾಮ ಭಟ್, ಪ್ರದೀಪದ ಕುಮಾರ್ ಕಲ್ಕೂರ,ವಿವಿಧ ಬಂಟರ ಸಂಘಗಳ ಪದಾಧಿಕಾರಿಗಳಾದ ರತ್ನಾಕರ್ ಶೆಟ್ಡಿ ಎಕ್ಕಾರ್, ಅಶೊಕ್ ಶೆಟ್ಟಿ ಮುಲ್ಕಿ, ಜಯರಾಮ‌ ಬೆಳ್ತಂಗಡಿ, ಮಹಾಬಲ ಚೌಟ,ವಿಜಯ ಶೆಟ್ಟಿ ಕಾರ್ಕಳ ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾಶಿವ ಶೆಟ್ಟಿ ಬಿಜೈ ಮೊದಲಾದವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ವೇದಮೂರ್ತಿ ಡಾ ಸತ್ಯ ಕೃಷ್ಣ ಭಟ್ ಅವರನ್ನು ಸನ್ಮಾನಿಸಲಾಯಿತು.
ಅಜಿತ್ ಕುಮಾರ್ ರೈ ಮಾಲಾಡಿ ಸ್ವಾಗತಿಸಿದರು. ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ವಂದಿಸಿದರು. ಕಿರಣ್ ಪಕ್ಕಳ ಕಾರ್ಯಕ್ರಮ ನಿರೂಪಿಸಿದರು.
*ಶೋಭಾಯಾತ್ರೆಗೆ ಚಾಲನೆ*
ಉದ್ಯಮಿ ಸುಯೋಗ್ ಶೆಟ್ಟಿ ಶೋಭಾಯಾತ್ರೆಗೆ ಚಾಲನೆ ನೀಡಿದರು. ಸಂಜೆ 5 ಗಂಟೆಗೆ ಗಣ್ಯರ ಉಪಸ್ಥಿತಿಯಲ್ಲಿ ವಿಸರ್ಜನ ಪೂಜೆ ನಡೆಯಿತು. ಶೋಭಾಯಾತ್ರೆಯು ಓಂಕಾರ ನಗರದಿಂದ ಶ್ರದ್ಧಾಭಕ್ತಿಯಿಂದ ಜಿಲ್ಲೆಯ ವಿವಿಧ ಭಜನಾ ತಂಡಗಳ ಸೇವೆಯೊಂದಿಗೆ ಬಂಟ್ಸ್ ಹಾಸ್ಟೇಲ್ ಸರ್ಜಲ್, ಪಿವಿಎಸ್ ವೃತ್ತ, ನ್ಯೂಚಿತ್ರಾ ಟಾಕೀಸ್, ರಥಬೀದಿ, ವೆಂಕಟರಮಣ ದೇವಸ್ಥಾನದ ರಸ್ತೆಯಲ್ಲಿ ಸಾಗಿ ಶ್ರೀ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು