10:37 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

Mangaluru | ಶಕ್ತಿನಗರ: ಹಿಂದು ಮಹಾ ಶಕ್ತಿ ಗಣಪತಿ ಉತ್ಸವ ಸಂಪನ್ನ

19/09/2026, 22:35

ಮಂಗಳೂರು(reporterkarnataka.com): ಶ್ರೀ ಗುರು ದತ್ತಾತ್ರೇಯ ಸೇವಾ ಟ್ರಸ್ಟ್ ವತಿಯಿಂದ ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ–ದುರ್ಗಾವಾಹಿನಿ ಶ್ರೀ ವೈದ್ಯನಾಥ ಶಾಖೆ ಶಕ್ತಿನಗರ ಸಹಕಾರದೊಂದಿಗೆ ಪ್ರಥಮ ವರ್ಷದ ‘ಹಿಂದು ಮಹಾ ಶಕ್ತಿ ಗಣಪತಿ’ ಉತ್ಸವವು ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಬಳಿಯಿರುವ ಛತ್ರಪತಿ ಶಿವಾಜಿ ವೃತ್ತದ ಬಳಿ ನಡೆಯಿತು.


ಸೋಮವಾರ ಬೆಳಗ್ಗೆ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ಪೌರೋಹಿತ್ಯದಲ್ಲಿ ಗಣಪತಿ ಬಿಂಬ ಪ್ರತಿಷ್ಠೆ ಹಾಗೂ ಗಣಹೋಮ ನೆರವೇರಿತು. ನಂತರ ಅತಿಥಿಗಳು ಗಾಗೂ ಸಮಿತಿ ಪಧಾದಿಕಾರಿಗಳು ಗಣೇಶೊತ್ಸವಕ್ಕೆ ಚಾಲನೆ ನೀಡಿದರು. ಬಳಿಕ ವಿಶ್ವ ಹಿಂದೂ ಪರಿಷತ್ ಶ್ರೀಕೃಷ್ಣ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಹಾಗೂ ಮೂರು ಸ್ಥಳೀಯ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರುಗಿತು. ಸಂಜೆ ಬಾಲ ಸಂಸ್ಕಾರ ಕೇಂದ್ರದ ಮಕ್ಕಳು ಹಾಗೂ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಉದ್ಯಮಿ ಸೀತಾರಾಮ ಶೆಟ್ಟಿ ವಹಿಸಿದ್ದರು. ಉದ್ಯಮಿ ಅವಿನಾಶ್ ಅಂಚನ್ ಕಾರ್ಯಕ್ರಮ ಉದ್ಘಾಟಿಸಿದರು. ವಿಶ್ವ ಹಿಂದೂ ಪರಿಷತ್ ನಾಗುರಿ ಪ್ರಖಂಡ ಕಾರ್ಯದರ್ಶಿ ಶರತ್ ಕೆಂಬಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಜರಂಗದಳ ಮಂಗಳೂರು ವಿಭಾಗ ಸಂಯೋಜಕ ಪುನೀತ್ ಅತ್ತಾವರ ದಿಕ್ಸೂಚಿ ಭಾಷಣ ಮಾಡಿದರು. ಗಣೇಶ ಚತುರ್ಥಿ ಪ್ರಯುಕ್ತ ಪ್ರತಿವರ್ಷ ಆಯೋಜಿಸಲಾಗುವ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ವಿಶ್ವ ಹಿಂದೂ ಪರಿಷತ್ ಶ್ರೀಕೃಷ್ಣ ಬಾಲ ಸಂಸ್ಕಾರ ಕೇಂದ್ರ ಶಕ್ತಿನಗರದ ಮಾತಾಜಿ ರಮಾದೇವಿ, ವಿಶ್ವ ಹಿಂದೂ ಪರಿಷತ್ ಶ್ರೀ ವೈದ್ಯನಾಥ ಶಾಖೆ ಶಕ್ತಿನಗರದ ಅಧ್ಯಕ್ಷ ಪ್ರಸಾದ್ ಕುಂಟಲ್ಪಾಡಿ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಮಾತೃಶಕ್ತಿ–ದುರ್ಗಾವಾಹಿನಿ ಶ್ರೀ ವೈದ್ಯನಾಥ ಶಾಖೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ವಿಶ್ವ ಹಿಂದೂ ಪರಿಷತ್ ನಾಗುರಿ ಪ್ರಖಂಡ ಸಹ ಕಾರ್ಯದರ್ಶಿ ಮಾಲತಿ ಸ್ವಾಗತಿಸಿದರು. ಮಾತೃಶಕ್ತಿ–ದುರ್ಗಾವಾಹಿನಿ ಕಾರ್ಯಕರ್ತೆ ಸುಮಲತಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಸನ್ನಿಧಿ ಅಮೀನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಧನುಷ್ ಕುಲಾಲ್ ಹಾಗೂ ಶಕೀಲಾ ಕಾವ ಕಾರ್ಯಕ್ರಮ ಸಂಯೋಜಿಸಿದರು.
ಉತ್ಸವದ ಅಂಗವಾಗಿ ನಡೆದ ಭವ್ಯ ಶೋಭಾಯಾತ್ರೆಯಲ್ಲಿ ಬಾಲ ಸಂಸ್ಕಾರ ಕೇಂದ್ರದ ಮಕ್ಕಳ ಕುಣಿತ ಭಜನೆ, ಚೆಂಡೆ–ಸಿಂಗಾರಿ ಮೇಳ ತಂಡದೊಂದಿಗೆ ಗಣಪತಿ ಮೂರ್ತಿಯನ್ನು ಇರಿಸಲಾಗಿದ್ದ ಟ್ಯಾಬ್ಲೋ ಸಾಗಿತು. ಶಕ್ತಿನಗರದ ಛತ್ರಪತಿ ಶಿವಾಜಿ ವೃತ್ತದಿಂದ ಆರಂಭಗೊಂಡ ಶೋಭಾಯಾತ್ರೆಯು ಮುತ್ತಪ್ಪ ಗುಡಿ ದೇವಸ್ಥಾನದವರೆಗೆ ಸಾಗಿ, ಅಲ್ಲಿಂದ ಹಿಂತಿರುಗಿ ಬಿಕರ್ನಕಟ್ಟೆ, ಕೈಕಂಬ, ಮರೋಳಿ ಮಾರ್ಗವಾಗಿ ಪಡೀಲ್ ಬೈರಾಡಿ ಕೆರೆಗೆ ತಲುಪಿ, ಶ್ರೀ ಮಹಾಗಣಪತಿ ದೇವರ ವಿಗ್ರಹಕ್ಕೆ ವಿಸರ್ಜನಾ ಪೂಜೆ ನೆರವೇರಿಸಿ ಜಲಸ್ತಂಭನಗೊಳಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು