8:51 PM Wednesday23 - September 2026
ಬ್ರೇಕಿಂಗ್ ನ್ಯೂಸ್
ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ…

ಇತ್ತೀಚಿನ ಸುದ್ದಿ

ಆರೋಗ್ಯಕರ ಬದುಕಿಗೆ ಆಯುರ್ವೇದ ಸಹಕಾರಿ: ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ

23/09/2026, 20:45

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಆಯುರ್ವೇದವು ಜೀವನದ ಪ್ರತಿಯೊಂದು ಹಂತದಲ್ಲಿಯೂ ಆರೋಗ್ಯಕರ ಜೀವನ ನಡೆಸಲು ಸಹಕಾರಿಯಾಗಲಿದೆ. ಪ್ರತಿಯೊಬ್ಬರೂ ಆಯುರ್ವೇದದ ಮಹತ್ವವನ್ನು ಅರಿತುಕೊಳ್ಳಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು.
ಅವರು ಬುಧವಾರ ನಗರದ ಕದ್ರಿ ಲಯನ್ಸ್ ಅಶೋಕ ಸೇವಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ಆಶ್ರಯದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ಆಯುಷ್ ಸಂಘಟನೆಗಳು ಇವರ ಸಹಯೋಗದೊಂದಿಗೆ ನಡೆದ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.





ಆಯುರ್ವೇದವು ಉತ್ತಮ ಜೀವನಶೈಲಿ ರೂಪಿಸಿಕೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಆಯುರ್ವೇದದ ಆರೋಗ್ಯ ಸಂರಕ್ಷಣಾ ತತ್ವಗಳನ್ನು ಅಳವಡಿಸಿಕೊಂಡು ಆರೋಗ್ಯಕರ ಸಮಾಜ ನಿರ್ಮಿಸಬಹುದು. ರೋಗ ಬಂದ ನಂತರ ಚಿಕಿತ್ಸೆ ಪಡೆಯುವ ಬದಲು, ಆರೋಗ್ಯವನ್ನು ಕಾಪಾಡಿಕೊಳ್ಳುವ ಮುನ್ನೆಚ್ಚರಿಕಾ ಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ರಾಜ್ಯ ಕನಿಷ್ಠ ವೇತನಾ ಸಲಹಾ ಮಂಡಳಿ ಅಧ್ಯಕ್ಷ ಶಾಹಿದ್ ತೆಕ್ಕಿಲ್ ಮಾತನಾಡಿ, ಸಾವಿರಾರು ವರ್ಷಗಳಿಂದಲೂ ದೇಶದಲ್ಲಿ ಆಯುರ್ವೇದ ಚಿಕಿತ್ಸಾ ಪದ್ಧತಿ ರೂಢಿಯಲ್ಲಿದೆ. ಆಯುರ್ವೇದವು ಪ್ರಕೃತಿ ಮತ್ತು ಮನುಷ್ಯನ ನಡುವಿನ ಅವಿನಾಭಾವ ಸಂಬಂಧವನ್ನು ಆಧರಿಸಿದ ಆರೋಗ್ಯ ಪದ್ಧತಿಯಾಗಿದೆ. ಮನುಷ್ಯನ ದೈನಂದಿನ ಜೀವನದಲ್ಲಿ ಎದುರಾಗುವ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಆಯುರ್ವೇದದಲ್ಲಿ ಸೂಕ್ತವಾದ ಪರಿಹಾರ ಹಾಗೂ ಆರೋಗ್ಯಕರ ಜೀವನಶೈಲಿಗೆ ಅಗತ್ಯವಾದ ಮಾರ್ಗದರ್ಶನ ದೊರೆಯುತ್ತದೆ ಎಂದು ಅವರು ಹೇಳಿದರು. ಇಂದಿನ ಬದಲಾಗುತ್ತಿರುವ ಜೀವನಶೈಲಿ ಹಾಗೂ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಆಯುರ್ವೇದದ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಲು ಆಯುರ್ವೇದದ ಕ್ರಮಗಳನ್ನು ಅರಿತುಕೊಳ್ಳುವುದು ಅಗತ್ಯ ಎಂದು ಅವರು ಹೇಳಿದರು.
ಡಾ.ಜಯಗೋವಿಂದ ಉಕ್ಕಿನಡ್ಕ ಹಾಗೂ ಶಾರದಾ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಂದೀಪ್ ಬೇಕಲ್ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಶಾಲೆಟ್ ಲವೀನಾ ಪಿಂಟೋ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಲೇಡಿಗೋಶನ್ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಜಿಲ್ಲಾ ಆಯುಷ್ ಅಧಿಕಾರಿ ಮುರಳೀಧರ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು