1:40 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ವಾಷಿಂಗ್ಟನ್ ತಲುಪಿದ ಪ್ರಧಾನಿ ಮೋದಿ:ಫ್ರಾಂಕ್‌ಫರ್ಟ್‌ನಲ್ಲಿ ಇಳಿಯದೇ ದೀರ್ಘ ಹಾರಾಟ!; 3 ದಿನಗಳ ಅಮೆರಿಕ ಪ್ರವಾಸ

23/09/2021, 15:59

ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಅಮೆರಿಕ ಭೇಟಿಗಾಗಿ ಗುರುವಾರ ವಾಷಿಂಗ್ಟನ್ ಗೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ದೆಹಲಿಯಿಂದ ನೇರವಾಗಿ ವಾಷಿಂಗ್ಟನ್ ಡಿಸಿ ತಲುಪಿರುವುದು ವಿಶೇಷವಾಗಿದೆ.

ದೆಹಲಿಯಿಂದ ವಾಷಿಂಗ್ಟನ್‌ಗೆ ಸಾಮಾನ್ಯವಾಗಿ15 ತಾಸು ಪ್ರಯಾಣ ಮಾಡಬೇಕಾಗುತ್ತದೆ. ವಿಮಾನ ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿ ಲ್ಯಾಂಡಿಂಗ್ ಆಗುತ್ತಿತ್ತು. ಫ್ರಾಂಕ್‌ಫರ್ಟ್‌ನಲ್ಲಿ ಇಂಧನ ತುಂಬಿಸಿಕೊಳ್ಳಲಾಗುತ್ತಿತ್ತು. ಆದರೆ ಈ ಬಾರಿ ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದ ವಿಮಾನ ಫ್ರಾಂಕ್‌ಫರ್ಟ್‌ನಲ್ಲಿ ಭೂಸ್ಪರ್ಶ ಮಾಡಿಲ್ಲ. ಬದಲಿಗೆ ದೆಹಲಿಯಿಂದ ನೇರವಾಗಿ ವಾಷಿಂಗ್ಟನ್ ಡಿಸಿಯಲ್ಲಿ ಬಂದು ಇಳಿದಿದೆ.

ಪ್ರಧಾನಿ ಮೋದಿ ಪ್ರಯಾಣಿಸಿದ ಹೊಸ ವಿಮಾನದಿಂದ ಇದು ಸಾಧ್ಯವಾಗಿದೆ.

ಹೊಸ ಏರ್ ಇಂಡಿಯಾ ಒನ್ ಬೋಯಿಂಗ್ ವಿಮಾನ ದೀರ್ಘಾವಧಿಯ ಹಾರಾಟದ ಸಾಮರ್ಥ್ಯ ಹೊಂದಿದೆ. ಮಾರ್ಗ ಮಧ್ಯೆ ಇಂಧನ ಮರುಭರ್ತಿಯ ಅಗತ್ಯ ಇರುವುದಿಲ್ಲ. ಪ್ರಧಾನಿಗಾಗಿ ಕಳೆದ ವರ್ಷ ಬೋಯಿಂಗ್ ವಿಮಾನವನ್ನು 4,500 ಕೋಟಿ ರೂಪಾಯಿ ವೆಚ್ಚದಲ್ಲಿ ಖರೀದಿ ಮಾಡಲಾಗಿತ್ತು. ಈ ವಿಮಾನದಲ್ಲಿ 2ನೇ ಬಾರಿಗೆ ಪ್ರಧಾನಿ ಮೋದಿ ವಿದೇಶ ಪ್ರಯಾಣ ಮಾಡಿದ್ದಾರೆ. ಪ್ರಸಕ್ತ ವರ್ಷ ಮಾರ್ಚ್‌ನಲ್ಲಿ ಬಾಂಗ್ಲಾದೇಶಕ್ಕೆ ಪ್ರಯಾಣ ಬೆಳೆಸಿದ್ದರು. ಇದೀಗ ಅಮೆರಿಕಕ್ಕೆ ತೆರಳಿದ್ದಾರೆ. ಇದರೊಂದಿಗೆ ಭಾರತ ಈಗ ಅಡ್ವಾನ್ಸ್ಡ್​​ ಏರ್ ಕ್ರಾಫ್ಟ್ ಹೊಂದಿದಂತಾಗಿದೆ. ಈ ಹಿಂದೆ ಪ್ರಧಾನ ಮಂತ್ರಿಗಳು

ಆಮೆರಿಕಕ್ಕೆ ಹೋಗವಾಗ ವಿಮಾನ ಜರ್ಮನಿಯ ಫ್ರಾಂಕ್ ಫರ್ಟ್ ನಲ್ಲಿ ಲ್ಯಾಂಡಿಂಗ್ ಆಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು