ಇತ್ತೀಚಿನ ಸುದ್ದಿ
Bangalore | ರಾಜ್ಯ ಹೈಕೋರ್ಟ್ ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವಿಕಾರ
25/09/2026, 20:30
*ಪದವಿಯ ಅಧಿಕಾರ ಪ್ರಮಾಣ ವಚನ ಬೋಧಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್*
*ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗಿ*
ಬೆಂಗಳೂರು(reporterkarnataka.com): ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನ್ಯಾಯಮೂರ್ತಿ ಉಷಾರಾಣಿ, ನ್ಯಾಯಮೂರ್ತಿ ಕುರುಬ ಶಾಂತಪ್ಪ ಭರತ್ ಕುಮಾರ್ ಮತ್ತು ನ್ಯಾಯಮೂರ್ತಿ ನೇರಳೆ ವೀರಭದ್ರಯ್ಯ ಭವಾನಿ ಅವರು ಪ್ರಮಾಣ ವಚನ ಸ್ವೀಕರಿಸಿದರು.


ಇಂದು ಲೋಕಭವನದ ಗಾಜಿನ ಮನೆಯಲ್ಲಿ ಆಯೋಜಿಸಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪದವಿಯ ಅಧಿಕಾರ ಪ್ರಮಾಣ ವಚನ ಭೋಧಿಸಿದರು.
ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಸಲೀಂ ಅಹಮ್ಮದ್ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ವಿಬು ಭಖ್ರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಗಣ್ಯರು, ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳು, ರಿಜಿಸ್ಟ್ರಾರ್ ಜನರಲ್ ಅವರು ಸೇರಿದಂತೆ ವಕೀಲರು, ಪ್ರಮಾಣ ವಚನ ಸ್ವೀಕರಿಸಿದ ಗೌರವಾನ್ವಿತ ಹೆಚ್ಚುವರಿ ನ್ಯಾಯಮೂರ್ತಿಗಳ ಕುಟುಂಬ ವರ್ಗದವರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.












