3:43 PM Tuesday29 - September 2026
ಬ್ರೇಕಿಂಗ್ ನ್ಯೂಸ್
ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ

ಇತ್ತೀಚಿನ ಸುದ್ದಿ

ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

29/09/2026, 15:22

ಮಂಗಳೂರು(reporterkarnataka.com): ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಹುದ್ದೆಯಿಂದ ವಜಾಗೊಳಿಸಿ ಬಂಧಿಸಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಪಂಪ್ ವೆಲ್ ಮಹಾವೀರ ವೃತ್ತದಿಂದ ಜಿಲ್ಲಾ ಚುನಾವಣಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ಮತ್ತು ಪ್ರತಿಭಟನಾ ಸಭೆ ನಡೆಯಿತು.
ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಮತ್ತು ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ
ಪ್ರತಿಭಟನಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್
ಜಿಲ್ಲಾಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ಸ್ವತಂತ್ರ ಮತ್ತು ನ್ಯಾಯಸಮ್ಮತ ಚುನಾವಣೆಗಳೇ ಪ್ರಜಾಪ್ರಭುತ್ವದ ಜೀವಾಳವಾಗಿರುವಾಗ, ಸಂವಿಧಾನಬದ್ಧವಾಗಿ ಕೆಲಸ ಮಾಡಬೇಕಾದ ಚುನಾವಣಾ ಆಯೋಗವು ಆಡಳಿತರೂಢ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ ಎಂದರು.
ನೀತಿ ಸಂಹಿತೆ ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಆಯೋಗ ತೋರುತ್ತಿರುವ ತಾರತಮ್ಯ, ವಿರೋಧ ಪಕ್ಷಗಳ ದೂರುಗಳ ವ್ಯವಸ್ಥಿತ ಕಡೆಗಣನೆ ಹಾಗೂ ಆಡಳಿತ ಪಕ್ಷಕ್ಕೆ ಅನುಕೂಲಕರವಾಗಿ ರೂಪಿಸಲಾಗುವ ಚುನಾವಣಾ ವೇಳಾಪಟ್ಟಿಗಳು ಇಡೀ ಸಂಸ್ಥೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನೇ ಧೂಳೀಪಟ ಮಾಡಿವೆ. ಸಾಂವಿಧಾನಿಕ ಸ್ವಾಯತ್ತತೆಯನ್ನು ಗಾಳಿಗೆ ತೂರಿ ಕರ್ತವ್ಯಲೋಪ ಎಸಗಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ಸಲ್ಲಿಸಬೇಕು ಹಾಗೂ ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿರುವ ಅವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ವಿಧಾನ ಪರಿಷತ್ ಸದಸ್ಯರಾದ ಪಿ.ವಿ. ಮೋಹನ್, ಐವನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್. ಲೋಬೋ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ಎಂ.ಎಸ್. ಮಹಮ್ಮದ್, ಹೇಮನಾಥ ಶೆಟ್ಟಿ ಕಾವು, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್, ಮುಡಾ ಮಾಜಿ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಾಜಿ ಮೇಯರ್‌ಗಳಾದ ಶಶಿಧರ ಹೆಗ್ಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಎತ್ತಿರುವ ದನಿ ಕೇವಲ ರಾಜಕೀಯ ಆರೋಪವಲ್ಲ, ಅದು ಭಾರತದ ಸಂವಿಧಾನ ಮತ್ತು ಪ್ರಜಾತಂತ್ರದ ಅಸ್ತಿತ್ವದ ಹೋರಾಟ. ಸ್ವತಃ ಚುನಾವಣಾ ಆಯೋಗದ ಆಯುಕ್ತರೇ ಮತದಾರರ ಪಟ್ಟಿ ಪರಿಷ್ಕರಣೆಯ ಲೋಪಗಳ ಕುರಿತು ಹದಿನಾಲ್ಕಕ್ಕೂ ಹೆಚ್ಚು ಬಾರಿ ಆಕ್ಷೇಪಣೆ ದಾಖಲಿಸಿರುವ ಸಂಗತಿ ಮಾಧ್ಯಮಗಳಿಂದ ಬಯಲಾಗಿದೆ. ವೋಟ್ ಚೋರಿ ಆರೋಪಗಳ ಕುರಿತು ಸಮಗ್ರ ತನಿಖೆ ನಡೆದು ಜನರ ಮತದಾನದ ಹಕ್ಕಿಗೆ ಸೂಕ್ತ ರಕ್ಷಣೆ ಸಿಗುವವರೆಗೂ ಈ ಹೋರಾಟ ನಿಲ್ಲದು ಎಂದು ಪದ್ಮರಾಜ್ ಆರ್. ಪೂಜಾರಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು