10:09 PM Tuesday29 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಾಡಿದ ಘೋಷಣೆಗಳ ಅನುಷ್ಠಾನಕ್ಕೆ ಸರಕಾರ ಬದ್ದ: ಉಸ್ತುವಾರಿ ಸಚಿವ ಖಾದರ್

29/09/2026, 22:09

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಘೋಷಣೆ ಮಾಡಿದ ಯೋಜನೆಗಳನ್ನು ಅನುಷ್ಠಾನ ಮಾಡಲು ಸರಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.
ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಯಾವೆಲ್ಲ ಯೋಜನೆಗಳಿಗೆ ಅನುದಾನ ಘೋಷಣೆ ಮಾಡಲಾಗಿದೆಯೋ ಅವುಗಳನ್ನು ಅನುಷ್ಠಾನ ಮಾಡಲು ಸರಕಾರ ಬದ್ಧವಾಗಿದೆ. ಅನುದಾನದ ಕೊರತೆ ಆಗದು ಎಂದರು.
ಆರ್ಥಿಕ ಇಲಾಖೆಯು ಪ್ರತೀ ಮೂರು ಅಥವಾ ಆರು ತಿಂಗಳಿಗೊಮ್ಮೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡುವುದು ಅದರ ಆಡಳಿತಾತ್ಮಕ ಪ್ರಕ್ರಿಯೆ. ಇದೇ ವೇಳೆ ಸಚಿವ ಸಂಪುಟದಲ್ಲಿ ಘೋಷಣೆ ಮಾಡಿರುವ ಯೋಜನೆಗಳ ಅನುಷ್ಠಾನ ಮುಖ್ಯಮಂತ್ರಿ ಹಾಗೂ ಸರಕಾರದ ಜವಾಬ್ಧಾರಿಯಾಗಿರುತ್ತದೆ. ಅದನ್ನು ಹೇಗೆ, ಯಾವ ರೀತಿಯಲ್ಲಿ ಮಾಡಬೇಕು ಎಂಬುದನ್ನು ಸರಕಾರ ನಿರ್ಧರಿಸಲಿದೆ ಎಂದು ಸಚಿವರು ನುಡಿದರು.
ಬಿಜೆಪಿಯವರು ತಮ್ಮ ಅವಧಿಯಲ್ಲಿ ಏನು ಮಾಡಿದ್ದಾರೆ, ಏನು ಮಾಡಲಿದ್ದಾರೆ? ಕನಿಷ್ಠ ಸಚಿವ ಸಂಪುಟ ಸಭೆಯನ್ನು ಕರಾವಳಿಯಲ್ಲಿ ಮಾಡಿದ್ದಾರೆಯೇ, ಯಾವುದಾದರೂ ನೀತಿ ಜಾರಿಗೊಳಿಸಿದ್ದಾರೆಯೇ? ಅದನ್ನು ಹೇಳಲಿ. ನಾವು ಘೋಷಣೆ ಮಾಡಿದ್ದನ್ನು ಈಡೇರಿಸುತ್ತೇವೆ ಎಂದರು.
ತುಳು ಭಾಷೆಗೆ ಮಾನ್ಯತೆ ನೀಡುವುದಕ್ಕೆ ಸಂಬಂಧಿಸಿ ಡಾ.ಎಂ.ಮೋಹನ್ ಆಳ್ವ ತಂಡ ನೀಡಿದ ವರದಿ ಬಿಜೆಪಿ ಅವಧಿಯಲ್ಲಿ ಅವರ ಕೈಯಲ್ಲಿತ್ತು. ಇಲ್ಲಿನ ಸುನೀಲ್ ಕುಮಾರ್ ಅವರೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿದ್ದರು. ವರದಿ ಕೈಯಲಿದ್ದು, ಸಹಿ ಹಾಕಲು ಮಾತ್ರ ಬಾಕಿ ಇದ್ದಿದ್ದು. ಅದಕ್ಕೂ ಧೈರ್ಯ ಬೇಕು. ಆ ಧೈರ್ಯವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಡಿದ್ದಾರೆ. ಈ ರೀತಿ ಸುಮ್ಮನೆ ಮಾತುಗಳಲ್ಲಿ ಆರೋಪ ಮಾಡುತ್ತಾ ಹೋದರೆ ಜಿಲ್ಲೆಯ ಜನ ಇವರನ್ನು ಕ್ಷಮಿಸುವುದಿಲ್ಲ. ಜಿಲ್ಲೆಯ ಜನರು ಶ್ರಮಜೀವಿಗಳು, ಹೆಂಚು, ಗೇರು, ಧಕ್ಕೆಯಲ್ಲಿ ಶ್ರಮ ವಹಿಸಿ ದುಡಿದು ಮೇಲೆ ಬಂದವರು. ಉಪಕಾರ ಮಾಡಿದವರನ್ನು ಮರೆಯುವುದಿಲ್ಲ. ಮುಂದಿನ ದಿನಗಳಲ್ಲಿ ಜನತೆ ಅದನ್ನು ತೋರಿಸಿಕೊಡಲಿದ್ದಾರೆ. ಸುಮ್ಮನೆ ರಾಜಕೀಯ ಮಾಡುವ ಬದಲು ಏನು ಮಾಡಿದ್ದಾರೆ ಏನು ಮಾಡುತ್ತಾರೆ ಹೇಳಲಿ ಎಂದು ಬಿಜೆಪಿ ಆರೋಪಗಳ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಬಿಜೆಪಿಯವರಿಗೆ ಯಾವುದೂ ಯೋಜನೆ ಅನುಷ್ಠಾನ ಆಗುವುದು ಬೇಡ. ಘೋಷಣೆಯಾಗಿ ಕನಿಷ್ಠ ಆರರಿಂದ ಒಂದು ವರ್ಷವಾದರೂ ಯೋಜನೆ ಜಾರಿಯಾಗದಿದ್ದರೆ ಈ ರೀತಿಯ ರಾಜಕೀಯವನ್ನು ಒಪ್ಪಬಹುದು. ಆದರೆ ಸಚಿವ ಸಂಪುಟ ಆಗುವ ಮೊದಲೇ ವೇದವ್ಯಾಸ ಕಾಮತ್ ಚೊಂಬು ಖರೀದಿಸಿ ಮನೆಯಲ್ಲಿ ಇರಿಸಿದ್ದರೆ ಏನು ಮಾಡುವುದು ಎಂದು ಖಾದರ್ ವ್ಯಂಗ್ಯವಾಡಿದರು.
ಪಿಪಿಪಿ ಹೆಸರಿನಲ್ಲಿ ಯೋಜನೆಗಳ ಅನುಷ್ಠಾನವಾದರೂ ನಿಯಂತ್ರಣ ಸರಕಾರದ ಬಳಿ ಇರಲಿದೆ. ಯಾವುದೇ ಬೃಹತ್ ಯೋಜನೆಗಳನ್ನು ಜಾರಿಗೆ ತಂದಾಗ ನಿರ್ವಹಣೆಗೆ ಸರಕಾರ ಖಾಸಗಿಯವರನ್ನು ನೇಮಕ ಮಾಡುತ್ತದೆ ಅಷ್ಟೇ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ದ.ಕ. ಜಿಲ್ಲೆಗೆ ಮಂಗಳೂರು ಮರುನಾಮಕರಣದ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಮೌಖಿಕ ಒಪ್ಪಿಗೆ ನೀಡಲಾಗಿದೆ. ಕೆಸಿಸಿಐ, ಸಣ್ಣ ಕೈಗಾರಿಕೆಗಳವರು, ಕ್ರೆಡೈ ಮೊದಲಾದವರು ಮಂಗಳೂರು ಹೆಸರಿಡುವ ಬಗ್ಗೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಜನರ ಬಹುಮತದ ಭಾವನೆಗಳಿಗೆ ಒತ್ತು ನೀಡುವ ಉದ್ದೇಶದಿಂದ ಒಂದು ತಿಂಗಳ ಕಾಲ ಆಕ್ಷೇಪ ಸಲ್ಲಿಕೆ ಅವಕಾಶ ನೀಡಲಾಗುವುದಾಗಿ ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ. ಆಕ್ಷೇಪ ಸಲ್ಲಿಕೆಗೆ ಕರಡು ಅಧಿಸೂಚನೆ ಹೊರಡಿಸುವ ಬಗ್ಗೆ ವಿಚಾರಿಸುವುದಾಗಿ, ಜಿಲ್ಲಾಧಿಕಾರಿ ಮೂಲಕವೂ ಆಕ್ಷೇಪ ಸಲ್ಲಿಕೆಗೆ ಅವಕಾಶವಿರಲಿದೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.
ವೆನ್ಲಾಕ್ ಆಸ್ಪತ್ರೆಗೆ 400 ಹೆಚ್ಚುವರಿ ಬೆಡ್ ಗಳ ಬೇಡಿಕೆಯ ಮೇರೆಗೆ ಸರಕಾರ ಪ್ರಾಥಮಿಕ ಹಂತದಲ್ಲಿ 200 ಬೆಡ್ ಗಳನ್ನು ಮಂಜೂರುಗೊಳಿಸಿದೆ. ವೆನ್ ಲಾಕ್ ನಲ್ಲಿ ಉತ್ತಮ ಸೇವೆ ದೊರೆಯುತ್ತಿರುವುದರಿಂದ ಇಲ್ಲಿ ಬೇಡಿಕೆಯೂ ಹೆಚ್ಚುತ್ತಿದೆ. ದುಡ್ಡಿರುವವರೂ ವೆನ್ಲಾಕ್ ನ ಐಸಿಯು ವಿಭಾಗದಲ್ಲಿ ಚಿಕಿತ್ಸೆ ಪಡೆಯಲು ಮುಂದಾಗುತ್ತಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಕಾಸರಗೋಡು ಮೊದಲಾದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳಿದ್ದರೂ, ಅಲ್ಲಿಂದ ವೆನ್ಲಾಕ್ ಗೆ ರೋಗಿಗಳನ್ನು ಶಿಫಾರಸು ಮಾಡಲಾಗುತ್ತಿರುವುದರಿಂದ ಒತ್ತಡ ಹೆಚ್ಚುತ್ತಿದೆ. ಇದಕ್ಕಾಗಿ ಸ್ಟಾಂಡರ್ಡ್ ಅಪರೇಶನ್ ಪ್ರೊಸೀಜರ್ (ಎಸ್‌ಒಪಿ)ಯನ್ನು ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆಗೂ ಸಲಹೆ ನೀಡಲಾಗಿದೆ.
ಸಂದಿಗ್ಧ ಪರಿಸ್ಥಿತಿಯ ರೋಗಿಗಳನ್ನು ಹೊರತುಪಡಿಸಿ ಉಳಿದಂತೆ ಆಯಾ ಜಿಲ್ಲೆ, ತಾಲೂಕುಗಳ ರೋಗಿಗಳಿಗೆ ಸ್ಥಳೀಯ ಸರಕಾರಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಒದಗಿಸಲು ಕ್ರಮ ವಹಿಸಬೇಕು. ಇದಕ್ಕಾಗಿ ತಾಲೂಕು ಆಸ್ಪತ್ರೆಗಳನ್ನು ಬಲಪಡಿಸಬೇಕು. ಇದಕ್ಕಾಗಿ ನಿಯಮಗಳನ್ನು ರೂಪಿಸಲಾಗುತ್ತಿದೆ. ಬೈಂದೂರು ಮತ್ತು ಮೂಡಬಿದ್ರೆಯಲ್ಲಿ ಹೊಸ ತಾಲೂಕು ಆಸ್ಪತ್ರೆ ಹಾಗೂ ಭಟ್ಕಳದ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಕ್ರಮ ವಹಿಸಲಾಗುವುದು ಎಂದು ವಿವರಿಸಿದರು.
ಡಿಸಿ ಮನ್ನಾ ಜಾಗ ಹಂಚಿಕೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಇತ್ಯರ್ಥವಾಗದ ಬಗ್ಗೆ ಉಸ್ತುವಾರಿ ಸಚಿವರ ಬಗ್ಗೆ ದಲಿತ ನಾಯಕರ ಅಸಮಾಧಾನದ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ, ಅವರು ನಮ್ಮ ಸಹೋದರರು. ಅವರ ನೋವು ನಮಗೆ ಅರ್ಥವಾಗುತ್ತದೆ. ಇದು ಕಂದಾಯ ಇಲಾಖೆಯ ಸಮಸ್ಯೆ ಆಗಿರುವುದರಿಂದ ಈ ಬಗ್ಗೆ ಸಂಬಂಧಪಟ್ಟ ಸಚಿವರ ಬಳಿ ಹೇಳಿದ್ದು, ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆಯೂ ಕೋರಲಾಗಿತ್ತು. ಬಂದಿಲ್ಲ ಎಂದಾದರೆ ಈ ಬಗ್ಗೆ ಸರಕಾರ ನಿರ್ಣಯ ಕೈಗೊಳ್ಳಬೇಕಿದೆ. ಮೂಡುಬಿದಿರೆ ಸತ್ಯಸಾರಮಣಿ ಕ್ಷೇತ್ರದ ಅನುದಾನ ನೀಡುವುದು ನಮ್ಮ ಜವಾಬ್ದಾರಿಯಾಗಿದ್ದು, ಅದನ್ನು ಒದಗಿಸಲಾಗುತ್ತದೆ ಎಂದು ಹೇಳಿದರು.
ಕೇಂದ್ರ ಚುನಾವಣಾ ಆಯೋಗದ ಆಯುಕ್ತರ ಬಗ್ಗೆ ಕೇಳಿ ಬಂದಿರುವ ಆಕ್ಷೇಪಗಳು ಗಂಭೀರವಾಗಿದ್ದು, ಮತದಾನವೆಂಬ ಸಮಾನತೆಯ ಹಕ್ಕನ್ನು ಉಲ್ಲಂಘಿಸಿದಂತಾಗಿದೆ. ಮತದಾರರ ಹೆಸರನ್ನು ಅಳಿಸುವುದು ಚುನಾವಣಾ ಆಯೋಗದ ಕೆಲಸವಲ್ಲ. ಬದಲಿಗೆ ಪ್ರತಿಯೊಬ್ಬ ಅರ್ಹ ಮತದಾರರಿಗೆ ಮತದಾನದ ಹಕ್ಕು ಕಲ್ಪಿಸುವುದು ಅದರ ಜವಾಬ್ದಾರಿ. ಹಾಗಾಗಿ ಚುನಾವಣಾ ಆಯೋಗದ ಕಾರ್ಯವೈಖರಿ ದುರದೃಷ್ಟಕರ ಎಂದರು.
ಮುಡಾ ಅಧ್ಯಕ್ಷ ಸಂತೋಷ್ ಕುಮಾರ್, ಜಿ.ಪಂ. ಮಾಜಿ ಸದಸ್ಯ ಮೆಲ್ವಿನ್, ಮುಖಂಡರಾದ ಸಲೀಂ, ಇಕ್ಬಾಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು