1:35 PM Wednesday30 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

Mrpl ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ: ಜೋಕಟ್ಟೆ ಪಂಚಾಯತ್ ಕಟ್ಟಡ ಸೇರಿ ಮನೆಗಳಿಗೆ ಹಾನಿ ;ಆತಂಕದ ವಾತಾವರಣ ನಿರ್ಮಾಣ

30/09/2026, 13:34

ಮಂಗಳೂರು:(reporterkarnataka.com):MRPL ಭಾಗದಲ್ಲಿ ಬುಧವಾರ ಮಧ್ಯಾಹ್ನ ಗಂಭೀರ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಜೋಕಟ್ಟೆ ಗ್ರಾಮ ಪಂಚಾಯತ್ ಕಟ್ಟಡ ಸೇರಿದಂತೆ ಸುತ್ತಮುತ್ತಲಿನ ಹಲವು ಮನೆಗಳು ಹಾಗೂ ಕಟ್ಟಡಗಳು ಕಂಪಿಸಿದ ಘಟನೆ ನಡೆದಿದೆ.

ಸ್ಫೋಟದ ಭಾರೀ ಶಬ್ದದಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಫೋಟದ ಪರಿಣಾಮ ಹಲವು ಮನೆಗಳ ಬಾಗಿಲು, ಕಿಟಕಿಗಳು ಹಾಗೂ ಗಾಜುಗಳು ಉದುರಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಕೆಲವು ಕಟ್ಟಡಗಳ ಗೋಡೆಗಳಿಗೂ ಹಾನಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಜಪೆಯಲ್ಲಿ ಸ್ಫೋಟದ ತೀವ್ರತೆಗೆ ಕಂಪನದ ಅನುಭವವಾಗಿದ್ದು, ಜನರು ಆತಂಕಗೊಂಡಿದ್ದಾರೆ.

ಸ್ಫೋಟ ಸಂಭವಿಸಿದ ಪ್ರದೇಶದ ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದ್ದು, ದೂರದಿಂದಲೂ ಹೊಗೆಯ ದೊಡ್ಡ ಪ್ರಮಾಣ ಗೋಚರಿಸುತ್ತಿದೆ. ಘಟನೆಯ ನಿಖರ ಕಾರಣ ಹಾಗೂ ಸ್ಫೋಟದ ತೀವ್ರತೆ ಕುರಿತು ಇನ್ನಷ್ಟೇ ಸ್ಪಷ್ಟ ಮಾಹಿತಿ ಲಭ್ಯವಾಗಬೇಕಿದೆ.

ಘಟನೆಯ ಬಳಿಕ ಸ್ಥಳೀಯರು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದು, ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುವ ನಿರೀಕ್ಷೆಯಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು