8:18 AM Tuesday26 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ಪಿಲಿಕುಂಡೇಲ್ ದಾಳಿ: ಎಡಪದವಿನಲ್ಲಿ ಎಸಿ ಮೆಕಾನಿಕ್ ಯುವಕ ದಾರುಣ ಸಾವು; ನಡೆದ ಘಟನೆಯಾದರೂ ಏನು?

23/09/2021, 19:19

ಮಂಗಳೂರು(reporterkarnataka.com): ಕಣಜದ ಹುಳುಗಳ(ಪಿಲಿಕುಂಡೇಲ್) ದಾಳಿಗೆ ಎಸಿ ಮೆಕಾನಿಕ್ ವೊಬ್ಬರು ಮೃತಪಟ್ಟ ದಾರುಣ ಘಟನೆ ಎಡಪದವಿನಲ್ಲಿ ನಡೆದಿದೆ. ಕೇಶವ ಯಾನೆ ಕಿಟ್ಟಿ (24) ಮೃತಪಟ್ಟವರು.

ಕೇಶವ ಅವರು ತಮ್ಮ ಮನೆಯ ತೆಂಗಿನ ಕಾಯಿ ಕೀಳಲು ಹೊಸದಾಗಿ ಖರೀದಿಸಿದ ಮರವೇರುವ ಯಂತ್ರದ ಮೂಲಕ ತೆಂಗಿನ ಮರವನ್ನೇರಿದ್ದರು. ಈ ಸಂದರ್ಭದಲ್ಲಿ ತೆಂಗಿನ ಮರದಲ್ಲಿ ಗೂಡುಕಟ್ಟಿದ್ದ ಕಣಜದ ಹುಳಗಳ ಗೂಡಿಗೆ ಕೇಶವ ಅವರ ತಲೆ ತಾಗಿತ್ತು. ಭಯಗೊಂಡ ಕಣಜದ ಹುಳಗಳು ಗೂಡಿನಿಂದ ಹಠಾತ್ ಹೊರಬಂದು ಕೇಶವ ಅವರ ಮೇಲೆ ದಾಳಿ ಮಾಡಲಾರಂಭಿಸಿತು. ಮೈಮೇಲೆ ಎಲ್ಲೆಂದರಲ್ಲಿ ಕಣಜದ ಹುಳಗಳು ಕಚ್ಚಿ ಗಾಯಗೊಳಿಸಿತು. ತೀವ್ರ ಗಾಯಗೊಂಡ ಕೇಶವ ಅವರನ್ನು ಮೂಡುಬಿದರೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಎಂಸಿಎಫ್ ನಲ್ಲಿ ಎಸಿ ಮೆಕಾನಿಕ್ ಆಗಿ ಕೆಲಸ ನಿರ್ವಹಿಸುತ್ತಿರುವ ಕೇಶವ ಅವರು ಎಡಪದವಿನ ಪಟ್ಲಚ್ಚಿಲ್ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ದಂಪತಿಯ ಪುತ್ರ. ಅವಿವಾಹಿತರಾದ ಅವರು ಮೂವರು ಸಹೋದರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು