2:57 PM Sunday22 - November 2026
ಬ್ರೇಕಿಂಗ್ ನ್ಯೂಸ್
ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8… ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು… ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು…

ಇತ್ತೀಚಿನ ಸುದ್ದಿ

​ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ: ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ​

30/09/2026, 19:05

​ಮಂಗಳೂರು(reporterkarnataka.com):ಕಳವಾರಿನಲ್ಲಿರುವ ಎಂಆರ್‌ಪಿಎಲ್ (MRPL) ಸಂಸ್ಥೆಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಸಂಭವಿಸಿದ ಸ್ಫೋಟದ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
​ದುರಂತ ಸಂಭವಿಸಿದ ತಕ್ಷಣವೇ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ಮತ್ತು ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿವೆ. ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸಲಾಗಿದೆ. ಯಾವುದೇ ರೀತಿಯ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಮೀಪದ ಆಸ್ಪತ್ರೆಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಪಡೆಗಳು ಸಂಪೂರ್ಣ ಸನ್ನದ್ಧವಾಗಿರಲು ಅಧಿಕಾರಿಗಳಿಗೆ ಸೂಚಿಸಿದರು.
​ಸ್ಫೋಟದ ತೀವ್ರತೆಯಿಂದಾಗಿ ಗಾಯಗೊಂಡವರಿಗೆ ತಕ್ಷಣವೇ ಉಚಿತ ಹಾಗೂ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಮತ್ತು ಆಸುಪಾಸಿನ ಮನೆ ಹಾಗೂ ಆಸ್ತಿ-ಪಾಸ್ತಿಗೆ ಹಾನಿಯಾಗಿರುವ ಪ್ರದೇಶಗಳ ಸಂತ್ರಸ್ತರಿಗೆ ಯಾವುದೇ ತೊಂದರೆಯಾಗದಂತೆ ತಕ್ಷಣವೇ ಅಗತ್ಯ ನೆರವು ಮತ್ತು ಸೂಕ್ತ ಪರಿಹಾರ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಅವರು ಸ್ಪಷ್ಟ ನಿರ್ದೇಶನ ನೀಡಿದರು.
ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾದ ಲಾರೆನ್ಸ್ ಡಿಸೋಜ, ಕಾಂಗ್ರೆಸ್‌ ಹಿರಿಯ ಮುಖಂಡರಾದ ಸುಭಾಶ್ಚಂದ್ರ ಕೊಳ್ನಾಡ್, ತಾಪಂ ಮಾಜಿ ಸದಸ್ಯ ಬಶೀರ್, ಕಾಂಗ್ರೆಸ್ ವಲಯಾಧ್ಯಕ್ಷರು, ಕಾಂಗ್ರೆಸ್‌ನ ಪ್ರಮುಖ ನಾಯಕರು, ಕಾರ್ಯಕರ್ತರು ಜತೆಗಿದ್ದರು.
​ಮಂಗಳೂರು(reporterkarnataka.com): ಕಳವಾರಿನಲ್ಲಿರುವ ಎಂಆರ್‌ಪಿಎಲ್ (MRPL) ಸಂಸ್ಥೆಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಸಂಭವಿಸಿದ ಸ್ಫೋಟದ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಾಹೀರಾತು