8:14 PM Thursday1 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20 ಕೋಟಿ ಪರಿಹಾರ

01/10/2026, 20:13

ಮಂಗಳೂರು(reporterkarnataka.com): ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಘಟಕದಲ್ಲಿ ಸಂಭವಿಸಿದ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ ಸಂಸ್ಥೆಯ ಆಡಳಿತ ಮಂಡಳಿ 1.20 ಕೋಟಿ ಪರಿಹಾರ ಘೋಷಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ಮಧ್ಯಸ್ಥಿಕೆಯಿಂದ ಈ ಪರಿಹಾರ ದೊರೆತಿದೆ.
ನಿನ್ನೆ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕೊಳ್ಳೇಗಾಲ ಪ್ರವಾಸದಿಂದ ಮಂಗಳೂರಿಗೆ ಧಾವಿಸಿದ ಸಚಿವರು, ಜಿಲ್ಲಾಧಿಕಾರಿಗಳೊಂದಿಗೆ ಎಂಆರ್‌ಪಿಎಲ್ ಘಟಕಕ್ಕೆ ಭೇಟಿ ನೀಡಿ ಘಟನಾ ಸ್ಥಳ ಪರಿಶೀಲಿಸಿದರು. ಬಳಿಕ ಸಂಸ್ಥೆಯ ಉನ್ನತಾಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಮೊತ್ತದ ಪರಿಹಾರ ಹಾಗೂ ಮೃತರ ಸಹೋದರನಿಗೆ ಖಾಯಂ ಉದ್ಯೋಗ ನೀಡಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಿದ್ದರು.

ಸಚಿವರ ಸೂಚನೆಗೆ ತಕ್ಷಣ ಸ್ಪಂದಿಸಿರುವ ಎಂಆರ್‌ಪಿಎಲ್, ಪರಿಹಾರ ಮೊತ್ತ ಘೋಷಿಸಿರುವುದರ ಜೊತೆಗೆ ಕುಟುಂಬದ ಸದಸ್ಯರಿಗೆ ಖಾಯಂ ಉದ್ಯೋಗ ನೀಡುವ ಪ್ರಸ್ತಾವನೆಯನ್ನು ಪರಿಶೀಲನೆಗೆ ಕೈಗೆತ್ತಿಕೊಂಡಿದೆ.
ಮೃತರ ಕುಟುಂಬದ ನೋವಿಗೆ ಯಾವುದೇ ಪರಿಹಾರ ಸಮನಾಗದು. ಆದರೆ ಆ ಕುಟುಂಬದ ಭವಿಷ್ಯ ಅತಂತ್ರವಾಗಬಾರದು ಎಂಬುದು ನಮ್ಮ ಆಶಯ. ಖಾಯಂ ಉದ್ಯೋಗದ ಭರವಸೆಯೂ ಶೀಘ್ರದಲ್ಲೇ ಈಡೇರುವಂತೆ ನಿರಂತರವಾಗಿ ನಿಗಾ ವಹಿಸುವುದಾಗಿ ಸಚಿವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು