10:33 AM Tuesday6 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಪುತ್ತೂರು | ಚಿನ್ನದ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ ಇನ್ನಿಲ್ಲ

05/10/2026, 09:22

ಪುತ್ತೂರು(reporterkarnataka.com): ಪುತ್ತೂರು, ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಶೋರೂಮ್ ಹೊಂದಿ ರಾಜ್ಯದ್ಯಾಂತ ಹೆಸರುವಾಸಿಯಾದ ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಮಾಲೀಕರಾದ ಸರಾಫ ಮುಳಿಯ ಶ್ಯಾಮ ಭಟ್ (81) ಅವರು ಅಕ್ಟೋಬರ್ 4ರಂದು ನಿಧನರಾದರು.
ಪುತ್ತೂರಿನ ಪಾಂಗಳಾಯಿಯಲ್ಲಿರುವ ಶ್ಯಾಮಲೋಚನಾ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಅವರು ಕೊನೆಯುಸಿರೆಳೆದರು. ಚಿನ್ನಾಭರಣ, ಬೆಳ್ಳಿ ಮತ್ತು ವಜ್ರ ವ್ಯವಹಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಮುಳಿಯ ಶ್ಯಾಮ ಭಟ್ ಅವರು ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಸಾಮಾಜಿಕ, ಸಾಹಿತ್ಯ ಕ್ಷೇತ್ರ ಮಾತ್ರವಲ್ಲದೇ ಧಾರ್ಮಿಕ ಕ್ಷೇತ್ರಗಳಿಗೆ ದಾನ ನೀಡುತ್ತಿದ್ದ ಅವರು ಕೊಡುಗೈ ದಾನಿ ಎಂದೇ ಪ್ರಸಿದ್ಧರಾಗಿದ್ದರು. ಮೃತರು ಪುತ್ರರಾದ ಕೇಶವಪ್ರಸಾದ ಮುಳಿಯ, ಕೃಷ್ಣನಾರಾಯಣ ಮುಳಿಯ, ಪುತ್ರಿ ವಿದ್ಯಾ ಸರಸ್ವತಿ, ಅಳಿಯ ಡಾ.ಶ್ಯಾಮಸುಂದರ್, ಸೊಸೆಯಂದಿರಾದ ಕೃಷ್ಣವೇಣಿ ಪ್ರಸಾದ್ ಮುಳಿಯ, ಅಶ್ವಿನಿ ಕೃಷ್ಣನಾರಾಯಣ ಮುಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

*6ರಂದು ಅಂತಿಮ ದರ್ಶನ*
ಅಕ್ಟೋಬರ್ 6ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ಪುತ್ತೂರಿನ ಪಾಂಗಳಾಯಿ ಮನೆಯಲ್ಲಿ ಅಂತಿಮ ದರ್ಶನ ಮತ್ತು ಗೌರವ ಸಮರ್ಪಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು