12:43 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ

10/10/2026, 11:42

ಮುಂಬೈ(reporterkarnataka.com): ದೆಹಲಿ ಪೊಲೀಸರು ಪ್ರತಿಭಟನೆಗೆ ಸ್ಪಷ್ಟವಾಗಿ ಅನುಮತಿಯನ್ನು ನಿರಾಕರಿಸಿದ್ದರೂ ಸಹ, ನಾಳೆ (ಅಕ್ಟೋಬರ್ 10) ದೆಹಲಿಯ ಜಂತರ್ ಮಂತರ್‌ನಲ್ಲಿ ತಾವು ಮತ್ತು ತಮ್ಮ ಸಂಘಟನೆಯು ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ ( ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಸ್ಪಷ್ಟಪಡಿಸಿದ್ದಾರೆ. ಮುಂಬೈನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ದಿಪ್ಕೆ, ‘ನಮ್ಮ ಆಂದೋಲನ ನಿಲ್ಲುವುದಿಲ್ಲ. ಜಂತರ್ ಮಂತರ್ ನಿಗದಿತ ಪ್ರತಿಭಟನಾ ಸ್ಥಳವಾಗಿದೆ. ಸಂವಿಧಾನದ ವಿಧಿ 19 ಪ್ರತಿಭಟಿಸುವ ಮೂಲಭೂತ ಹಕ್ಕನ್ನು ನೀಡುತ್ತದೆ. ಹಾಗಿದ್ದಾಗ ಅನುಮತಿ ಪಡೆಯುವ ಅಗತ್ಯವೇನಿದೆ?’ ಎಂದು ಪ್ರಶ್ನಿಸಿದ್ದಾರೆ.
ಎಸ್​ಐಆರ್​ ಪ್ರಕ್ರಿಯೆಯ ವಿಚಾರವಾಗಿ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ’13 ಕೋಟಿ ಮತಗಳನ್ನು ತೆಗೆದು ಹಾಕುವ ಮೊದಲು ಅವರು ಅನುಮತಿ ಪಡೆದಿದ್ದರೆ? ಹಾಗಿರುವಾಗ ಚುನಾವಣೆಯಲ್ಲಿ ಅಕ್ರಮ ಎಸಗುವವರ ವಿರುದ್ಧ ನಾವು ಪ್ರತಿಭಟನೆ ನಡೆಸಬಾರದು ಎಂದು ಹೇಳುವುದು ಎಷ್ಟು ಸರಿ? ಇದು ಸಾಧ್ಯವಿಲ್ಲ. ದೇಶವನ್ನು ಉಳಿಸಲು ನಾವು ಪ್ರತಿಭಟನೆ ನಡೆಸುತ್ತೇವೆ’ ಎಂದಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಭಾರತದಾದ್ಯಂತ ಸಾವಿರಾರು ಯುವಕರನ್ನು ಬಂಧಿಸಲಾಗುತ್ತಿದೆ ಎಂದು ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ದಿಪ್ಕೆ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಅವರ ಈ ಹೇಳಿಕೆ ಬಂದಿದೆ. ಇಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ದಿಪ್ಕೆ, ‘ನಮ್ಮ ಅಕ್ಟೋಬರ್ 10ರ ಪ್ರತಿಭಟನೆಗೆ ಮುನ್ನ ಬಿಜೆಪಿ ಸರ್ಕಾರವು ದೇಶಾದ್ಯಂತ ಸಾವಿರಾರು ಯುವಕರನ್ನು ವಶಕ್ಕೆ ಪಡೆದಿದೆ. ಈ ಬೆದರಿಕೆ ತಂತ್ರಗಳು ನಡೆಯುವುದಿಲ್ಲ ಮೋದಿಯವರೇ. ಈ ದೇಶದ ಯುವಕರು ಇನ್ನು ಮುಂದೆ ನಿಮಗೆ ಹೆದರುವುದಿಲ್ಲ’ ಎಂದು ಹೇಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು