3:52 PM Monday19 - October 2026
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ…

ಇತ್ತೀಚಿನ ಸುದ್ದಿ

*ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ವಿರುದ್ಧ ಮಗದೊಂದು ಸುತ್ತಿನ ಸಮರಕ್ಕೆ ವೇದಿಕೆ ಸಜ್ಜು*

19/10/2026, 15:43

ನವದೆಹಲಿ(reporterkarnataka.com): ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ವಿರುದ್ಧ ಮತ್ತೊಂದು ಸುತ್ತಿನ ಹೋರಾಟ ನಡೆಸಲು ಇಂಡಿಯಾ ಕೂಟ ಮತ್ತು ವಿವಿಧ ಸಂಘಟನೆಗಳು ಸಿದ್ಧತೆ ಆರಂಭಿಸಿವೆ. ಮೊದಲ ಹಂತದಲ್ಲಿ ಅ.23ರಂದು ದೇಶಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಲಿದ್ದರೆ, ನ.1ರಂದು ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟದಿಂದ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಜ್ಞಾನೇಶ್‌ ಕುಮಾರ್‌ ಅವರು ಸಂವಿಧಾನವನ್ನು ಹಾಳು ಮಾಡಲು ಯತ್ನಿಸಿದ್ದಾರೆ. ಹೀಗಾಗಿ ಅವರನ್ನು ಪದಚ್ಯುತಗೊಳಿಸಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳು ಹಾಗೂ ವಿಪಕ್ಷಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿವೆ. ಇದರ ಮುಂದುವರಿದ ಭಾಗವಾಗಿ ಅ.23ರಂದು ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸುವಂತೆ ಸೂಚಿಸಲಾಗಿದೆ. ಈ ಪ್ರತಿಭಟನೆಗೆ ‘ಪ್ರಜಾಪ್ರಭುತ್ವ ಮರುಸ್ಥಾಪನೆಗಾಗಿ ಜನ ಜಾಥಾ’ ಎಂದು ಹೆಸರಿಡಲಾಗಿದೆ. ಪ್ರತಿಭಟನೆಯ ವೇಳೆ ದೇಶದಲ್ಲಿ ನಡೆದಿರುವ ಎಸ್‌ಐಆರ್‌ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಲು ‘ಎಸ್‌ಐಆರ್‌ ವಿರುದ್ಧ ಜನತೆ'(ಪೀಪಲ್‌ ಅಗೈನ್ಸ್ಟ್ ಎಸ್‌ಐಆರ್‌) ಎಂಬ ಸಂಘಟನೆ ಸೂಚನೆ ನೀಡಲಾಗಿದೆ.
ಬಿಜೆಪಿಗೆ ಲಾಭ ಮಾಡಿಕೊಡಲು ನರೇಂದ್ರ ಮೋದಿ, ಅಮಿತ್‌ ಶಾ ಹಾಗೂ ಜ್ಞಾನೇಶ್‌ ಕುಮಾರ್‌ ಅವರು ಜತೆಯಾಗಿ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಇದರಿಂದಾಗಿ ದೇಶದಲ್ಲಿ 13.41 ಕೋಟಿ ಜನ ತಮ್ಮ ಮತದಾನದ ಹಕ್ಕು ಕಳೆದುಕೊಂಡಿದ್ದಾರೆ. ಸಂಸತ್ತಿನ ಅನುಮೋದನೆಯಿಲ್ಲದೆ ನಮೂನೆ 6ನ್ನು ಸಹ ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ವಿಪಕ್ಷಗಳು, ನಾಗರಿಕ ಸಂಘಟನೆಗಳು ಆರೋಪಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು