8:23 PM Sunday25 - October 2026
ಬ್ರೇಕಿಂಗ್ ನ್ಯೂಸ್
ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.…

ಇತ್ತೀಚಿನ ಸುದ್ದಿ

ಮಂಗಳೂರು | ದ್ವಿಚಕ್ರ ವಾಹನಗಳ ಕಳವು ಪ್ರಕರಣ ಪತ್ತೆ: ಬಾಲಕರು ಸೇರಿದಂತೆ 7 ಮಂದಿ ಪೊಲೀಸ್ ವಶಕ್ಕೆ

25/10/2026, 20:19

ಮಂಗಳೂರು(reporterkarnataka.com):ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕರು ಸೇರಿದಂತೆ 7 ಆರೋಪಿಗಳ ಪತ್ತೆ ಹಚ್ಚಲಾಗಿದ್ದು,ಒಟ್ಟು 9 ದ್ವಿಚಕ್ರ ವಾಹನಗಳ ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ವೆಲೆನ್ಸಿಯಾ ಜಂಕ್ಷನ ಬಳಿಯಿರುವ ಡಾನ ಬಾಸ್ಕೋ ಹಾಸ್ಟೇಲ್ ಬಳಿ ದಿನಾಂಕ:12-10-2026 ರಂದು ನಿಲ್ಲಿಸಿದ್ದ *ಕೆ.ಟಿ.ಎಮ್ ಡ್ಯೂಕ್ ಮೋಟಾರು ಸೈಕಲ್*, ದಿನಾಂಕ 19-10-2026 ರಂದು ಜಪ್ಪು ಮಾರ್ಕೆಟ್ ಬಳಿ ನಿಲ್ಲಿಸಿದ್ದ *ಯಮಹಾ ಎಫ್.ಜೆಡ್ ಮೋಟಾರ್ ಸೈಕಲ್*, ದಿನಾಂಕ 21-10-2026 ರಂದು ಅತ್ತಾವರ ಕೆ.ಎಮ್.ಸಿ ಆಸ್ಪತ್ರೆಯ ಬಳಿಯಿರುವ ದುರ್ಗಾ ಹೋಟೇಲ್ ಮುಂದೆ ನಿಲ್ಲಿಸಿದ್ದ *ಬಜಾಜ್ ಡಿಸ್ಕವರಿ ಬೈಕ್* ಹಾಗೂ ದಿನಾಂಕ 22-10-2026 ರಂದು ಹೊಯಿಗೆ ಬಜಾರ ನ ಭಗವತಿ ಅಪಾರ್ಟಮೆಂಟ್ ಕೆಳಗೆ ನಿಲ್ಲಿಸಿದ್ದ *ಕೆ.ಟಿ.ಎಂ. ಡ್ಯೂಕ್ ಬೈಕ್* ಕಳವಾಗಿರುತ್ತದೆ. ಅದೇ ರೀತಿ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ಬಳಿ ದಿನಾಂಕ 18-10-2026 ರಂದು ನಿಲ್ಲಿಸಲಾಗಿದ್ದ *ರಾಯಲ್ ಎನ್ ಪೀಲ್ಡ್ ಬುಲೆಟ್ ಮೋಟಾರ್ ಸೈಕಲ್* ಹಾಗೂ ಕುತ್ತಾರ್ ಪಂಡಿತ್ ಹೌಸ್ ಬಳಿ ದಿನಾಂಕ 21-10-2026 ರಂದು *ಯಮಹಾ ಎಫ್.ಜೆಡ್ ಮೋಟಾರ್ ಸೈಕಲ್* ಕಳವಾಗಿರುತ್ತದೆ. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ 4 ಪ್ರಕರಣಗಳು ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿತ್ತು.
ಕಳವಾಗಿರುವ ದ್ವಿಚಕ್ರ ವಾಹನಗಳ ಆರೋಪಿಗಳ ಪತ್ತೆಗಾಗಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಅಪರಾಧ ಪತ್ತೆ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು. ಸದರಿ ತಂಡವು ತನಿಖೆ ನಡೆಸಿ, ಮಾಹಿತಿ ಸಂಗ್ರಹಿಸುವ ಮೂಲಕ *ಒಟ್ಟು 7 ಜನರನ್ನು ವಶಕ್ಕೆ* ಪಡೆದುಕೊಂಡು ವಿಚಾರಣೆ ನಡೆಸಿರುತ್ತದೆ.

*ಆರೋಪಿಗಳ ವಿವರ*
1. *ಮಹಮ್ಮದ್ ಸಿಯಾಮ್* ಪ್ರಾಯ 19 ವರ್ಷ , ತಂದೆ: ಫೈಝಲ್ ಅಹ್ಮದ್ , ವಾಸ: ಶಿವನಗರ, ಮೂಡುಶೆಡ್ಡೆ ಗ್ರಾಮ ವಾಮಂಜೂರು , ಮಂಗಳೂರು ನಗರ,

2. *ಮುಹಮ್ಮದ್ ನಾಸೀಫ್ @ ನಸೀಫ್* ಪ್ರಾಯ 19 ವರ್ಷ ತಂದೆ: ಟಿ. ಅಬ್ದುಲ್ ರಹೀಮ್ ವಾಸ: ಜೋಕಟ್ಟೆ, 62, ತೋಕೂರು, ಬೈಕಂಪಾಡಿ ಅಂಚೆ, ಮಂಗಳೂರು ನಗರ,

3. *ಮೊಹಮ್ಮದ್ ರಾಹೀಲ್* ಪ್ರಾಯ 18 ವರ್ಷ ತಂದೆ: ದಿ|| ಅಬ್ದುಲ್ ರಶೀದ್, ವಾಸ: ಶಿವನಗರ, ಮೂಡುಶೆಡ್ಡೆ ಗ್ರಾಮ, ವಾಮಂಜೂರು, ಮಂಗಳೂರು ನಗರ.

4. *ನಿಖೀಲ್* ಪ್ರಾಯ 18 ವರ್ಷ ತಂದೆ: ರೋಣಪ್ಪ ಮಾಧರ್ , ವಾಸ: ಸದಾಶಿವ ನಗರ, ತಿರುವೈಲು , ಕುಟ್ಟಿ ಪಲ್ಕೆ , ಮಂಗಳೂರು,
ಕಳವು ಮಾಡಲಾಗಿದ್ದ ಎಲ್ಲಾ 06 ದ್ವಿಚಕ್ರ ವಾಹನಗಳನ್ನು, ಮತ್ತು ಕೃತ್ಯಕ್ಕೆ ಬಳಸಿದ 03 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು ಇವುಗಳ ಒಟ್ಟು ಅಂದಾಜು ಮೌಲ್ಯ-4.50.000/- ರೂ ಆಗಿರುತ್ತದೆ.
ವಿಚಾರಣೆಯಿಂದ, ಆರೋಪಿಗಳು ಇತರ ದುಶ್ಕೃತ್ಯಗಳಾದ ಸರಗಳ್ಳತನ ಮುಂತಾದ ಕೃತ್ಯಗಳನ್ನು ಎಸಗಿ ಅದರ ಲಾಬಾಂಶದಿಂದ ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದರು ಎಂಬುದು ತಿಳಿದು ಬಂದಿರುತ್ತದೆ. ಬೆಲೆಬಾಳುವ ಮೋಟಾರ್ ಸೈಕಲ್ ಗಳನ್ನು ಗುರಿಯಾಗಿಸಿ, ನಿಲುಗಡೆ ಮಾಡಿದ್ದ ಸ್ಥಳಗಳಿಂದ ಕಳವು ಮಾಡಿ, ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದುದಾಗಿ ತನಿಖೆಯಿಂದ ತಿಳಿದುಬಂದಿರುತ್ತದೆ. ಬಂಧಿತ 4 ಜನ ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಈ ಪತ್ತೆ ಕಾರ್ಯದಲ್ಲಿ ಮಂ.ದಕ್ಷಿಣ ಪೊಲೀಸ್ ಠಾಣೆಯ *ಪೊಲೀಸ್ ನಿರೀಕ್ಷಕರಾದ ರಾಘವೇಂದ್ರ ಬೈಂದೂರ ರವರ ನೇತೃತ್ವದಲ್ಲಿ ಪಿ.ಎಸ್.ಐ ಮಾರುತಿ ಹಾಗೂ ಕ್ರೈಂ ಸಿಬ್ಬಂದಿಗಳಾದ ಲಕ್ಷ್ಮಣ ಸಾಲೋಟಗಿ, ಪುಟ್ಟರಾಮ್, ಸಾಗರ ದೇವಕತ್ತಿ, ಆಂಜನೇಯ ಕೆ.ಎಸ್, ರವರು ಭಾಗವಹಿಸಿದ್ದು,* ಮಂಗಳೂರು ದಕ್ಷಿಣ ಠಾಣಾ ಅಧಿಕಾರಿ ಸಿಬ್ಬಂದಿಯವರು ಪತ್ತೆ ಕಾರ್ಯಕ್ಕೆ ಸಹಕರಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು