ಇತ್ತೀಚಿನ ಸುದ್ದಿ
ವಿಧಾನ ಪರಿಷತ್ತಿನ ಪದವೀಧರ, ಶಿಕ್ಷಕರ ಕ್ಷೇತ್ರದ ಫಲಿತಾಂಶ ಪ್ರಕಟ: 4 ಸ್ಥಾನವೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಮಡಿಲಿಗೆ
27/10/2026, 22:41
ಬೆಂಗಳೂರು(reporterkarnataka.com): ವಿಧಾನ ಪರಿಷತ್ತಿನ 2 ಪದವೀಧರ, 2 ಶಿಕ್ಷಕರ ಕ್ಷೇತ್ರ ಸೇರಿ ಒಟ್ಟು 4 ಕ್ಷೇತ್ರಗಳಿಗೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ನ ಎನ್ ಡಿಎ ಮೈತ್ರಿಕೂಟ 4 ಸ್ಥಾನಗಳಲ್ಲೂ ಗೆಲುವು ಸಾಧಿಸಿದೆ. ಇದರೊಂದಿಗೆ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ.

ಬಿಜೆಪಿ ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಎ.ಪಿ. ರಂಗನಾಥ್ 908 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಐದು ಬಾರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಸೋಲು ಕಂಡಿದ್ದಾರೆ. ಇನ್ನು ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮತ್ತೂರ್ ಸೋಲು ಅನುಭವಿಸಿದ್ದಾರೆ.
ಪಶ್ಚಿಮ ಪದವೀಧರರ ಕ್ಷೇತ್ರದ ಎಣಿಕೆ ಧಾರವಾಡದಲ್ಲಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಎಣಿಕೆ ಕಲಬುರಗಿಯಲ್ಲಿ, ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಆಗ್ನೇಯ ಪದವೀಧರರ ಕ್ಷೇತ್ರದ ಮತ ಎಣಿಕೆ ಬೆಂಗಳೂರಲ್ಲಿ ನಡೆಯಿತು.












