4:43 PM Wednesday28 - October 2026
ಬ್ರೇಕಿಂಗ್ ನ್ಯೂಸ್
ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026

ಇತ್ತೀಚಿನ ಸುದ್ದಿ

ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ

28/10/2026, 16:20

ಬೆಂಗಳೂರು(reporterkarnataka.com): ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 4-0 ಅಂತರದ ಐತಿಹಾಸಿಕ ಗೆಲುವು ಸಾಧಿಸಿದ ಬೆನ್ನಲ್ಲೇ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 120 ರಿಂದ 130 ಸ್ಥಾನಗಳನ್ನು ಗೆದ್ದು ಬಿಜೆಪಿ-ಜೆಡಿಎಸ್ ಮೈತ್ರಿಕೂಟವೇ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಎಂಎಲ್‌ಸಿ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಮತದಾರರು ನೀಡಿದ ತಕ್ಕ ಉತ್ತರವಾಗಿದ್ದು, ರಾಜ್ಯದ 120 ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳ ಜನರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ವಿಶ್ಲೇಷಿಸಿದರು.

*ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ವಾಗ್ದಾಳಿ:* ಗ್ಯಾರಂಟಿ ಯೋಜನೆಗಳ ಭರವಸೆಯಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರವು ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಮೂಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣಗಳು ಸರ್ಕಾರದ ಮುಖವಾಡವನ್ನು ಕಳಚಿವೆ ಎಂದು ಆರೋಪಿಸಿದರು.

*ಬ್ಯಾಲೆಟ್ ಪೇಪರ್ ಸೋಲಿಗೆ ಟಾಂಗ್:* ಬ್ಯಾಲೆಟ್ ಪೇಪರ್ ಬಳಸಿ ನಡೆದ ಈ ಚುನಾವಣೆಯಲ್ಲೂ ಕಾಂಗ್ರೆಸ್ ಮುಖಭಂಗ ಅನುಭವಿಸಿದೆ. ಈ ಫಲಿತಾಂಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿಯವರ ಗಮನಕ್ಕೆ ತರಲಿ ಎಂದು ವ್ಯಂಗ್ಯವಾಡಿದರು.

*ಕಬ್ಬು ಬೆಳೆಗಾರರಿಗೆ ₹500 ಪ್ರೋತ್ಸಾಹಧನ ಆಗ್ರಹ:* ಕಬ್ಬು ಬೆಳೆಗಾರರ ಸಮಸ್ಯೆಯನ್ನು ಪ್ರಸ್ತಾಪಿಸಿದ ಅವರು, ಸರ್ಕಾರ ಪ್ರತಿ ಟನ್ ಕಬ್ಬಿಗೆ ₹500 ಪ್ರೋತ್ಸಾಹಧನ ನೀಡಬೇಕು ಎಂದು ಒತ್ತಾಯಿಸಿದರು.

*ಮೈಸೂರು ರಾಜಮನೆತನದ ಅಪಮಾನಕ್ಕೆ ಕ್ಷಮೆಗೆ ಆಗ್ರಹ:*
ಮೈಸೂರು ರಾಜಮನೆತನದ ಕುರಿತು ಸಚಿವ ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆಯನ್ನು ಖಂಡಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಯತೀಂದ್ರ ಅವರು ಯದುವಂಶಸ್ಥರ ಬಳಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು