8:57 PM Saturday31 - October 2026
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ… ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಕಳ್ಳರ ವಿಕೃತಿ: ಅಪಘಾತ ತಡೆಯಲು ಹಾಕಿದ್ದ ಸುರಕ್ಷತಾ ಕನ್ನಡಿಗಳೇ ಕಳವು!

31/10/2026, 20:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರಯಾಣಿಕರ ಜೀವ ರಕ್ಷಣೆಗಾಗಿ ಅಪಾಯಕಾರಿ ತಿರುವುಗಳಲ್ಲಿ ಅಳವಡಿಸಿದ್ದ ಮಹತ್ವದ ಸುರಕ್ಷತಾ ಕನ್ನಡಿಗಳನ್ನೇ ಕಿಡಿಗೇಡಿಗಳು ಕಳ್ಳತನ ಮಾಡಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ವರದಿಯಾಗಿದೆ.
​ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಒಟ್ಟು 11 ಅತ್ಯಂತ ಅಪಾಯಕಾರಿ ತಿರುವುಗಳಿವೆ. ಈ ತಿರುವುಗಳಲ್ಲಿ ಎದುರಿನಿಂದ ಬರುವ ವಾಹನಗಳು ಸ್ಪಷ್ಟವಾಗಿ ಗೋಚರಿಸುವಂತೆ ಧರ್ಮಸ್ಥಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ವಿಶೇಷ ಕನ್ನಡಿಗಳನ್ನು ಅಳವಡಿಸಲಾಗಿತ್ತು. ಹಗಲಿರುಳು ವಾಹನ ಸವಾರರಿಗೆ ನೆರವಾಗುತ್ತಿದ್ದ ಈ ಕನ್ನಡಿಗಳಿಂದಾಗಿ ಘಾಟ್ ಪ್ರದೇಶದಲ್ಲಿ ಸಂಭವಿಸುತ್ತಿದ್ದ ಭೀಕರ ಅಪಘಾತಗಳ ಸಂಖ್ಯೆ ಗಣನೀಯವಾಗಿ ತಗ್ಗಿತ್ತು.



​ಆದರೆ, ದುಡಿಯಲು ಸೋಮಾರಿಗಳಾದ ಕೆಲವು ಕಿರಾತಕರು ಮತ್ತು ಮೈಗಳ್ಳರು ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. ಅಪಘಾತ ತಗ್ಗಿಸಲು ನೆರವಾಗಿದ್ದ ಈ ಕನ್ನಡಿಗಳನ್ನೇ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ತಿರುವುಗಳಲ್ಲಿ ಕನ್ನಡಿಗಳು ಮಾಯವಾಗಿರುವುದರಿಂದ ವಾಹನ ಸವಾರರು ಮತ್ತೆ ಪ್ರತಿದಿನ ಪ್ರಾಣಭಯದಲ್ಲೇ ಸಂಚರಿಸುವಂತಾಗಿದೆ.
​ಘಟನೆಯ ಗಂಭೀರತೆಯನ್ನು ಮನಗಂಡಿರುವ ಸ್ಥಳೀಯರು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಕಳುವಾಗಿರುವ ಜಾಗದಲ್ಲಿ ಹೊಸ ಕನ್ನಡಿಗಳನ್ನು ಮರುಅಳವಡಿಸಬೇಕು ಎಂದು ಆಗ್ರಹಿಸಿದ್ದಾರೆ. “ಇದು ಕೇವಲ ಕನ್ನಡಿಯಲ್ಲ, ನೂರಾರು ಪ್ರಯಾಣಿಕರ ಜೀವ ಉಳಿಸುವ ಸಂಜೀವಿನಿ. ಯಾರೂ ಇಂತಹ ಕೃತ್ಯಗಳಿಗೆ ಕೈಹಾಕಬೇಡಿ” ಎಂದು ಸಾಮಾಜಿಕ ಕಾರ್ಯಕರ್ತ. ಸಂಜಯ್ ಗೌಡ ಕೊಟ್ಟಿಗೆಹಾರ ಅಗ್ರಹಿಸಿದ್ದಾರೆ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು