2:49 PM Sunday1 - November 2026
ಬ್ರೇಕಿಂಗ್ ನ್ಯೂಸ್
ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ… ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ… ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ…

ಇತ್ತೀಚಿನ ಸುದ್ದಿ

ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆ

01/11/2026, 14:35

ಬೆಂಗಳೂರು(reporterkarnataka.com): ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೆ ಪಕ್ಷಕ್ಕೆ ಮರಳಲಿದ್ದಾರೆ ಎಂಬ ಚರ್ಚೆ ರಾಜ್ಯ ರಾಜಕಾರಣದಲ್ಲಿ ತೀವ್ರಗೊಂಡಿದೆ. ಈ ನಡುವೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಯತ್ನಾಳ್‌ ಅವರ ಎರಡು ಷರತ್ತುಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎನ್ನಲಾದ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಯತ್ನಾಳ್ ಮುಂದಿಟ್ಟಿರುವ ಎರಡು ಷರತ್ತುಗಳೇನು?
ಯತ್ನಾಳ್ ಅವರು ಬಿಜೆಪಿಗೆ ಮರಳಲು ಎರಡು ಷರತ್ತುಗಳನ್ನು ಮುಂದಿಟ್ಟಿದ್ದಾರೆ ಎಂದು ವಿಜಯೇಂದ್ರ ತಿಳಿಸಿದ್ದಾರೆ ಎನ್ನಲಾಗಿದೆ. ಮೊದಲನೆಯದಾಗಿ, ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬೇಕು. ಎರಡನೆಯದಾಗಿ, ಮುಂದಿನ ಹತ್ತು ವರ್ಷಗಳ ಕಾಲ ತಾವು ಮುಖ್ಯಮಂತ್ರಿ ಆಗುವುದಿಲ್ಲ ಎಂದು ವಿಜಯೇಂದ್ರ ಲಿಖಿತವಾಗಿ ಭರವಸೆ ನೀಡಬೇಕು ಎಂಬುದು ಯತ್ನಾಳ್‌ ಅವರ ಷರತ್ತು ಎಂದು ಕಾರ್ಯಕ್ರಮವೊಂದರಲ್ಲಿ ವಿಜಯೇಂದ್ರ ಮತ್ತು ಯತ್ನಾಳ್ ಮುಖಾಮುಖಿಯಾಗಿದ್ದರು. ಇಬ್ಬರೂ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದರು ಎಂಬ ಮಾಹಿತಿ ಹೊರಬಂದಿತ್ತು. ಈ ಭೇಟಿಯ ಬಳಿಕ ಬಿಜೆಪಿ ವಲಯದಲ್ಲಿ ಇಬ್ಬರ ನಡುವಿನ ಭಿನ್ನಾಭಿಪ್ರಾಯ ಕಡಿಮೆಯಾಗುತ್ತಿದೆಯೇ ಎಂಬ ಚರ್ಚೆ ಆರಂಭವಾಗಿತ್ತು.ಆದರೆ, ಈ ಭೇಟಿಯು ಪಕ್ಷಕ್ಕೆ ಮರಳುವ ಕುರಿತು ಅಂತಿಮ ಒಪ್ಪಂದವಾಗಿದೆ ಎಂಬುದಕ್ಕೆ ದೃಢೀಕರಣ ಲಭ್ಯವಿಲ್ಲ. ಅಕ್ಟೋಬರ್ 19ರಂದು ಪ್ರಕಟವಾದ ವರದಿಯೂ ಈ ಭೇಟಿಯಿಂದ ಸಂಧಾನದ ಊಹಾಪೋಹಗಳು ಹೆಚ್ಚಾದರೂ ಯಾವುದೇ ಒಪ್ಪಂದ ಆಗಿಲ್ಲ ಎಂದು ತಿಳಿಸಿತ್ತು.

*ಯತ್ನಾಳ್‌ ಅವರ ನಿಲುವು ಏನು?*
ಅಕ್ಟೋಬರ್ 21ರಂದು ಮಾತನಾಡಿದ್ದ ಯತ್ನಾಳ್, ವಿಜಯೇಂದ್ರ ಅವರ ನಾಯಕತ್ವ ಬದಲಾವಣೆಯಾದ ಬಳಿಕವೇ ಬಿಜೆಪಿಗೆ ಮರಳುವ ಕುರಿತು ಮುಂದಿನ ಮಾತುಕತೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದರು. ಸೂಕ್ತ ಸ್ಥಾನಮಾನ ನೀಡಿದರೆ ಮಾತ್ರ ಪಕ್ಷಕ್ಕೆ ಮರಳುವ ಬಗ್ಗೆ ಯೋಚಿಸುವುದಾಗಿ ಹೇಳಿದ್ದರು. ಅಕ್ಟೋಬರ್ 22ರಂದು ಪ್ರಕಟವಾದ ವರದಿಯಲ್ಲಿಯೂ ಅವರು ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವ ಪರಿಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆ ಸಾಧ್ಯವಿಲ್ಲ ಎಂಬ ನಿಲುವು ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

*ದೆಹಲಿ ಭೇಟಿಯೂ ಕುತೂಹಲಕ್ಕೆ ಕಾರಣ*
ಇದರ ನಡುವೆ ಯತ್ನಾಳ್ ಅವರು ದೆಹಲಿಗೆ ತೆರಳಿ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ ಎಂಬ ವರದಿಗಳು ರಾಜಕೀಯ ಕುತೂಹಲ ಹೆಚ್ಚಿಸಿವೆ. ಕೇಂದ್ರ ಸಚಿವ ವಿ.ಸೋಮಣ್ಣ ಅವರ ನಿವಾಸದಲ್ಲಿ ಮಾತುಕತೆ ನಡೆದಿರುವುದಾಗಿಯೂ ವರದಿಯಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಸಂಬಂಧಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದಾಗಿ ಯತ್ನಾಳ್ ಹೇಳಿದ್ದು, ಪಕ್ಷಕ್ಕೆ ಮರಳುವ ವಿಚಾರದಲ್ಲಿ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸುವ ಉದ್ದೇಶವಿಲ್ಲ ಎಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು