8:25 PM Sunday1 - November 2026
ಬ್ರೇಕಿಂಗ್ ನ್ಯೂಸ್
ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ… ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ… ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ…

ಇತ್ತೀಚಿನ ಸುದ್ದಿ

ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ ಗಾಯ; ಮಂಗಳೂರಿಗೆ ತೆರಳುತ್ತಿದ್ದಾಗ ದುರಂತ

01/11/2026, 19:08

ಶಿವಮೊಗ್ಗ(reporterkarnataka.com): ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗದ ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ (ಎಂಡಿ) ವ್ಯಾಸಂಗ ಮಾಡುತ್ತಿದ್ದ ಯುವ ವೈದ್ಯ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾಯಚೂರು ಮೂಲದ ಡಾ. ಚೇತನ್ (28) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಕಾರಿನಲ್ಲಿದ್ದ ಇತರ ನಾಲ್ವರು ಸ್ನೇಹಿತರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

*​ಮಂಗಳೂರಿಗೆ ತೆರಳುತ್ತಿದ್ದಾಗ ದುರಂತ*
ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯಕೀಯ (MD) ವ್ಯಾಸಂಗ ಮಾಡುತ್ತಿದ್ದ ಡಾ. ಚೇತನ್ ಅವರು ತಮ್ಮ ಐವರು ಸ್ನೇಹಿತರೊಂದಿಗೆ ಕಾರಿನಲ್ಲಿ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದರು. ಕಾರು ಆಗುಂಬೆ ಸಮೀಪದ ಕವರಿಹಕ್ಲು ಎಂಬ ಪ್ರದೇಶದ ಬಳಿ ಸಾಗುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಮಣ್ಣಿನ ದಿಬ್ಬಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ತೀವ್ರವಾಗಿ ಗಾಯಗೊಂಡ ಡಾ. ಚೇತನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.​ಆಸ್ಪತ್ರೆಗೆ ಗಾಯಾಳುಗಳ ದಾಖಲು, ಪೊಲೀಸರ ಭೇಟಿ

ಅಪಘಾತದಲ್ಲಿ ಗಾಯಗೊಂಡ ಉಳಿದ ನಾಲ್ವರನ್ನು ತಕ್ಷಣವೇ ರಕ್ಷಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಿ ದಾಖಲಿಸಲಾಗಿದೆ. ಗಾಯಾಳುಗಳ ಪೈಕಿ ಓರ್ವನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಆಗುಂಬೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು