2:24 PM Monday2 - November 2026
ಬ್ರೇಕಿಂಗ್ ನ್ಯೂಸ್
ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ… ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ… ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ…

ಇತ್ತೀಚಿನ ಸುದ್ದಿ

2027ರ ಜನವರಿ ಮೊದಲೆರಡು ವಾರಗಳಲ್ಲಿ ಜಿಪಂ, ತಾಪಂ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

02/11/2026, 14:24

ಬೆಂಗಳೂರು(reporterkarataka.com): ಜಿಲ್ಲಾ ಪಂಚಾಯ್ತಿ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗಳು 2027ರ ಜನವರಿ ಮೊದಲ ಅಥವಾ 2ನೇ ವಾರ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಬೆಂಗಳೂರಿನಲ್ಲಿ ಮಾತಾಡಿದ ಈಶ್ವರ್ ಖಂಡ್ರೆ, ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕರಡು ಮೀಸಲು ಅಧಿಸೂಚನೆ ಹೊರಡಿಸಿದೆ. ಬರುವ ಜನವರಿಯೊಳಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ನಡೆದೇ ನಡೆಯುತ್ತವೆ ಎಂದರು.
ಅ.19ರ ವರೆಗೆ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸುಮಾರು 2 ಸಾವಿರಕ್ಕೂ ಅಧಿಕ ಆಕ್ಷೇಪಣೆ ಬಂದಿದ್ದು, ಅಧಿಕಾರಿಗಳು ನಿಯಮಾನುಸಾರ ಪರಿಶೀಲನೆ ಮಾಡುತ್ತಿದ್ದು, ಶೀಘ್ರವೇ ಅಂತಿಮ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದರು.
ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದ ತರುವಾಯ ರಾಜ್ಯ ಚುನಾವಣೆ ಆಯೋಗ, ಕೇಂದ್ರ ಚುನಾವಣೆ ಆಯೋಗದಿಂದ ಮತದಾರರ ಪಟ್ಟಿ ಪಡೆದು ಅಥವಾ ತನ್ನಲ್ಲಿರುವ ಮತದಾರರ ಪಟ್ಟಿಯನ್ನೇ ಪರಿಷ್ಕರಿಸಿ ಚುನಾವಣೆ ನಡೆಸುವ ಕುರಿತಂತೆ ಕ್ರಮ ವಹಿಸಲಿದೆ. ಬಹುತೇಕ ಜನವರಿ ಮೊದಲ ಅಥವಾ 2ನೇ ವಾರದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳು ನಡೆಯುತ್ತವೆ. ಈ ಚುನಾವಣೆಗಳ ತರುವಾಯ ಗ್ರಾಮ ಪಂಚಾಯತಿ ಚುನಾವಣೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು