ಇತ್ತೀಚಿನ ಸುದ್ದಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ನಾಯಕರ ಆಕ್ರೋಶ: ಯಡಿಯೂರಪ್ಪ ನಿವಾಸದ ಬಳಿ ಬಿತ್ತಿಪತ್ರ ಅಂಟಿಸಿ ಕ್ಷಮೆಯಾಚನೆಗೆ ಆಗ್ರಹ
03/11/2026, 12:18
ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಿವಾಸದ ಬಳಿ ಬಿತ್ತಿಪತ್ರಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ನಾಯಕರ ಕುರಿತು ನೀಡಿರುವ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕು. ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಸಾರ್ವಜನಿಕ ಜೀವನದಲ್ಲಿ ಜವಾಬ್ದಾರಿಯುತವಾಗಿ ಮಾತನಾಡಬೇಕು. ರಾಜಕೀಯ ನಾಯಕರ ಘನತೆಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಬಾರದು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.












