11:45 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕಾರ್ಕಳ: ಹಟ್ಟಿಗೆ ನುಗ್ಗಿ ದನ ಕಳವು ಮಾಡುತ್ತಿದ್ದ ಚೋರರ ಸೆರೆ; ನ್ಯಾಯಾಲಯಕ್ಕೆ ಹಾಜರು

25/09/2021, 09:20

ಕಾರ್ಕಳ(reporterkarnataka.com): ಇಲ್ಲಿನ ಶಿರ್ಲಾಲು, ಕೆರ್ವಾಶೆ , ಅಂಡಾರು ಪರಿಸರದ ಮನೆಗಳ ಹಟ್ಟಿಗೆ ನುಗ್ಗಿ ದನಕಳ್ಳತನ ಮಾಡುತ್ತಿದ್ದ, ಕಳ್ಳರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಮೂಡಬಿದ್ರಿ ಗಂಟಾಲ್‌ಕಟ್ಟೆ ಪರಿಸರದ ಝಬೀರ್, ಸಲೀಮ್ ಹಾಗೂ ಹನೀಫ್‌ ಯಾನೆ ಇಚ್ಚನನ್ನು ಕಡ್ತಲ ಸತೀಶ್ ನಾಯ್ಕ್ ಬಂಧಿಸಿದ್ದಾರೆ.

ಕಾರ್ಕಳ ಡಿವೈಎಸ್‌ಪಿ ವಿಜಯ ಪ್ರಸಾದ್‌, ವೃತ್ತ ನಿರೀಕ್ಷಕ ಸಂಪತ್‌ ಕುಮಾರ್‌ ಮಾರ್ಗದರ್ಶನದಲ್ಲಿ ಅಜೆಕಾರು ಠಾಣೆ ಎಸ್‌ಐ ಸುದರ್ಶನ್‌, ಕಾರ್ಕಳ ಗ್ರಾಮಾಂತರ ಠಾಣೆ ಎಸ್‌ಐ ತೇಜಸ್ವಿ, ನಗರ ಠಾಣೆ ಎಸ್‌ಐ ಮಧು ಬಿ.ಇ. ಮತ್ತವರ ತಂಡ ಗೋಕಳ್ಳರ ಪತ್ತೆಗಾಗಿ ಬಲೆಬೀಸಿದ್ದರು.

ದನಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ  ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಅಜೆಕಾರು ಠಾಣೆಯೆದುರು ಇತ್ತೀಚೆಗೆ ಭಜನೆ ಮೂಲಕ ಪ್ರತಿಭಟನೆ ನಡೆಸಿದ್ದರು.

.

ಇತ್ತೀಚಿನ ಸುದ್ದಿ

ಜಾಹೀರಾತು