7:37 PM Tuesday3 - November 2026
ಬ್ರೇಕಿಂಗ್ ನ್ಯೂಸ್
Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ… ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್…

ಇತ್ತೀಚಿನ ಸುದ್ದಿ

ದೇಶದಲ್ಲಿ ಗೊಂದಲ ಮತ್ತು ಅಸ್ಥಿರತೆ ಸೃಷ್ಟಿಸಲು ಕೆಲವು ಶಕ್ತಿಗಳ ಯತ್ನ: ಶಾಸಕ ಡಿ. ವೇದವ್ಯಾಸ ಕಾಮತ್ ಆರೋಪ

03/11/2026, 19:35

ಮಂಗಳೂರು(repprterkarnataka.com): ದೇಶದಲ್ಲಿ ಗೊಂದಲ ಮತ್ತು ಅಸ್ಥಿರತೆಯ ವಾತಾವರಣ ಸೃಷ್ಟಿಸಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿವೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಆರೋಪಿಸಿದರು.
ದೇಶದ ಚುನಾವಣಾ ವ್ಯವಸ್ಥೆ, ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಮಾಡುತ್ತಿರುವ ಮತಗಳ್ಳತನದ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು,
ರಾಜಕೀಯ ಲಾಭಕ್ಕಾಗಿ ಸುಳ್ಳು ಮಾಹಿತಿ ಹಾಗೂ ಆಧಾರರಹಿತ ಆರೋಪಗಳನ್ನು ಹರಡುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಜನರ ವಿಶ್ವಾಸಕ್ಕೆ ಧಕ್ಕೆಯಾಗಬಹುದು. ಆದ್ದರಿಂದ ಸಾರ್ವಜನಿಕರು ಇಂತಹ ವಿಚಾರಗಳನ್ನು ಪರಿಶೀಲಿಸಿ, ಸತ್ಯಾಸತ್ಯತೆ ತಿಳಿದುಕೊಂಡು ಪ್ರತಿಕ್ರಿಯಿಸಬೇಕು ಎಂದು ಅವರು ಕರೆ ನೀಡಿದರು.
ಪಾರ್ಟಿಯೊಳಗೆ ಮತಗಳ್ಳತನ ಮಾಡಿ ಜವಾಹರಲಾಲ್ ನೆಹರೂ ಅವರನ್ನು ಪ್ರಧಾನಿಯನ್ನಾಗಿ ಮಾಡಿದವರು ಇಂದು ದೇಶದಲ್ಲಿ ಮತಗಳ್ಳತನದ ಬಗ್ಗೆ ಮಾತನಾಡುತ್ತಾ ನಾಟಕ ಮಾಡುತ್ತಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಟೀಕಿಸಿದ್ದಾರೆ.
ಭಾರತದ ಚುನಾವಣಾ ವ್ಯವಸ್ಥೆಯು ಅತ್ಯಂತ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಚುನಾವಣಾ ಆಯೋಗದ ನೇತೃತ್ವದಲ್ಲಿ ಚುನಾವಣೆಗಳನ್ನು ನಡೆಸಲಾಗುತ್ತದೆ. ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿಯೂ ಚುನಾವಣಾ ಅಧಿಕಾರಿಗಳ ನೇಮಕಾತಿ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು, ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯನ್ನು ನಿರ್ವಹಿಸುತ್ತಾರೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ವಿವಿಧ ಹಂತದ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಬೂತ್ ಮಟ್ಟದಲ್ಲಿ ಶಿಕ್ಷಕರು ಸೇರಿದಂತೆ ಶಿಕ್ಷಣ, ಆರೋಗ್ಯ, ಪಶುಸಂಗೋಪನೆ ಹಾಗೂ ಮಹಾನಗರ ಪಾಲಿಕೆಯಂತಹ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ಕಾಮತ್ ವಿವರಿಸಿದರು.
ಚುನಾವಣಾ ಆಯೋಗವು ಸ್ವತಂತ್ರವಾಗಿ ಹಾಗೂ ಸ್ವಾಯತ್ತವಾಗಿ ಕಾರ್ಯನಿರ್ವಹಿಸುವ ವ್ಯವಸ್ಥೆಯನ್ನು ಹೊಂದಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ. ಚುನಾವಣಾ ಆಯೋಗದ ನಿಯಮಗಳು ಮತ್ತು ಮಾರ್ಗಸೂಚಿಗಳ ಆಧಾರದಲ್ಲಿ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ ಎಂದು ಅವರು ತಿಳಿಸಿದರು.
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSR) ಪ್ರಕ್ರಿಯೆಯ ಕುರಿತು ಮಾತನಾಡಿದ ಅವರು, ಮತದಾರರ ಪಟ್ಟಿಯನ್ನು ಕಾಲಕಾಲಕ್ಕೆ ಪರಿಶೀಲಿಸಿ ಪರಿಷ್ಕರಿಸುವುದು ಚುನಾವಣಾ ವ್ಯವಸ್ಥೆಯ ಸಾಮಾನ್ಯ ಪ್ರಕ್ರಿಯೆಯಾಗಿದೆ. ಈ ಸಂದರ್ಭದಲ್ಲಿ ASDD (Absent, Shifted, Dead, Duplicate) ಅಂದರೆ ಗೈರುಹಾಜರಾದವರು, ಸ್ಥಳಾಂತರಗೊಂಡವರು, ಮೃತಪಟ್ಟವರು ಹಾಗೂ ನಕಲಿ ಅಥವಾ ಪುನರಾವರ್ತಿತ ಮತದಾರರ ಹೆಸರುಗಳನ್ನು ಗುರುತಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ. ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣದಿಂದ ಪಟ್ಟಿಯಿಂದ ಕೈಬಿಟ್ಟುಹೋಗದಂತೆ ಎಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯವಾಗಿದೆ ಎಂದರು.
ಈ ಪ್ರಕ್ರಿಯೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಅಧಿಕಾರಿಗಳು (BLO-1 ಮತ್ತು BLO-2) ಹಾಗೂ ಪಕ್ಷಗಳ ಪ್ರತಿನಿಧಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಬಿಜೆಪಿ, ಕಾಂಗ್ರೆಸ್, ಕಮ್ಯುನಿಸ್ಟ್, ಜೆಡಿಎಸ್ ಸೇರಿದಂತೆ ಎಲ್ಲಾ ಪಕ್ಷಗಳ ಪ್ರತಿನಿಧಿಗಳು ಮತದಾರರ ಪಟ್ಟಿಯನ್ನು ಪರಿಶೀಲಿಸಿ, ಹೆಸರುಗಳ ಸೇರ್ಪಡೆ, ತಿದ್ದುಪಡಿ ಹಾಗೂ ಕೈಬಿಡುವ ಪ್ರಕ್ರಿಯೆಗಳ ಬಗ್ಗೆ ಜಾಗೃತರಾಗಿರಬೇಕು. ಯಾವುದೇ ಜಾತಿ, ಮತ, ಧರ್ಮದ ವ್ಯಕ್ತಿಯಾಗಿದ್ದರೂ ಅರ್ಹ ಮತದಾರರ ಹೆಸರು ತಪ್ಪಾಗಿ ಕೈಬಿಟ್ಟುಹೋಗಿದ್ದರೆ ಅದನ್ನು ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಹಕ್ಕು ದೊರೆಯುವಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಒತ್ತಾಯಿಸಿದರು.
ಇತ್ತೀಚಿನ ದಿನಗಳಲ್ಲಿ ಕೆಲವು ರಾಜಕೀಯ ಪಕ್ಷಗಳು ದೇಶದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸುತ್ತಿವೆ. ಆದರೆ, ಇಂತಹ ಗಂಭೀರ ಆರೋಪಗಳನ್ನು ಮಾಡುವವರು ಅದಕ್ಕೆ ಸಂಬಂಧಿಸಿದ ಸೂಕ್ತ ದಾಖಲೆಗಳು ಮತ್ತು ನಿಖರವಾದ ಮಾಹಿತಿಗಳನ್ನು ಸಾರ್ವಜನಿಕವಾಗಿ ಒದಗಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲವೆಂದು ಹೇಳುವುದಷ್ಟೇ ಸಾಕಾಗುವುದಿಲ್ಲ. ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿ, ನಿಯಮಾನುಸಾರ ದೂರು ನೀಡುವ ಮೂಲಕ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು. ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಕೇವಲ ರಾಜಕೀಯ ಉದ್ದೇಶದಿಂದ ಮತಗಳ್ಳತನದ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಕಾಮತ್ ಅಭಿಪ್ರಾಯಪಟ್ಟರು.
ಬಿಜೆಪಿ ಪಕ್ಷದ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆಯ ವಿಚಾರವನ್ನೂ ಪ್ರಸ್ತಾಪಿಸಿದ ಅವರು, ಪಕ್ಷದೊಳಗೆ ನಾಯಕರ ಆಯ್ಕೆ ಹಾಗೂ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದ ಪ್ರಕ್ರಿಯೆಗಳಿದ್ದರೂ, ಬಹುಮತದ ಅಭಿಪ್ರಾಯದ ಆಧಾರದಲ್ಲಿ ನಿರ್ಧಾರಗಳನ್ನು ಕೈಗೊಳ್ಳುವ ಪದ್ಧತಿ ಇದೆ ಎಂದು ಹೇಳಿದರು.

ಚುನಾವಣೆಗಳಲ್ಲಿ ಗೆಲುವು ಅಥವಾ ಸೋಲು ಎದುರಾದಾಗಲೆಲ್ಲ ಚುನಾವಣಾ ವ್ಯವಸ್ಥೆಯ ಮೇಲೆ ಆರೋಪ ಮಾಡುವುದು ಸರಿಯಾದ ಕ್ರಮವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಚುನಾವಣಾ ವ್ಯವಸ್ಥೆಯ ಪಾರದರ್ಶಕತೆ ಕಾಪಾಡುವುದು ಚುನಾವಣಾ ಆಯೋಗ, ರಾಜಕೀಯ ಪಕ್ಷಗಳು, ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಮತದಾರರು ಸೇರಿದಂತೆ ಎಲ್ಲರ ಜವಾಬ್ದಾರಿಯಾಗಿದೆ. ಅರ್ಹ ಮತದಾರರ ಹಕ್ಕುಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವುದರ ಜೊತೆಗೆ, ಯಾವುದೇ ಆರೋಪವಿದ್ದರೂ ಸೂಕ್ತ ದಾಖಲೆಗಳೊಂದಿಗೆ ಕಾನೂನುಬದ್ಧವಾಗಿ ಮುಂದಿಡಬೇಕು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು